9:56 PM Sunday8 - November 2026
ಬ್ರೇಕಿಂಗ್ ನ್ಯೂಸ್
ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ…

ಇತ್ತೀಚಿನ ಸುದ್ದಿ

2029ರ ಚುನಾವಣೆಯಲ್ಲಿ ಬಿಜೆಪಿ ಮಕಾಡೆ ಮಲಗುವುದು ಗ್ಯಾರಂಟಿ: ಕೇಂದ್ರ ಸರ್ಕಾರದ ವಿರುದ್ಧ ಕೇರಳದಲ್ಲಿ ಗುಡುಗಿದ ಅಭಿಜೀತ್ ಡಿಪ್ಕೆ

08/11/2026, 21:49

ಕೊಚ್ಚಿ(reporterkarnataka.com): ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಅಭಿಜೀತ್ ಡಿಪ್ಕೆ ಅವರು ಮುಂಬರುವ 2029ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸೋಲನುಭವಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಕೇಂದ್ರದಲ್ಲಿ ಅಧಿಕಾರ ಬದಲಾವಣೆ ಖಚಿತವಾಗಿದ್ದು, ಇದಕ್ಕಾಗಿ ಜನರು ಈಗಿನಿಂದಲೇ ಸಜ್ಜಾಗಬೇಕು ಎಂದು ಅವರು ಕರೆ ನೀಡಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ಸಭೆಯನ್ನ ಉದ್ದೇಶಿಸಿ ಅವರು ಮಾತನಾಡಿದರು.

*ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಕೊಚ್ಚಿ ಪ್ರತಿಭಟನೆ*
ಸಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೊಚ್ಚಿಯಲ್ಲಿ ಜಂತರ್ ಮಂತರ್ ಅಭಿಯಾನದ ಭಾಗವಾಗಿ ಈ ಸಭೆಯನ್ನ ಆಯೋಜಿಸಲಾಗಿತ್ತು. ಕೇವಲ ಚುನಾವಣೆಗಳ ಮೂಲಕ ಮಾತ್ರವೇ ಕೇಂದ್ರದಲ್ಲಿ ಸರ್ಕಾರ ಬದಲಾವಣೆ ಸಾಧ್ಯವಿದ್ದು, ನಮಗೆ ಸ್ವತಂತ್ರ ಹಾಗೂ ನಿಷ್ಪಕ್ಷಪಾತವಾದ ಚುನಾವಣಾ ವ್ಯವಸ್ಥೆಯ ಅಗತ್ಯವಿದೆ ಎಂದು ಡಿಪ್ಕೆ ಪ್ರತಿಪಾದಿಸಿದರು.
ಪ್ರಜಾಪ್ರಭುತ್ವದಲ್ಲಿ ಚುನಾವಣಾ ಪಾರದರ್ಶಕತೆ ಅತ್ಯಂತ ಪ್ರಮುಖವಾಗಿದೆ, ಆದರೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸುವ ಸಲುವಾಗಿ ಎನ್‌ಡಿಎ ಸರ್ಕಾರವು ದೇಶದ ಯುವಜನತೆಯ ವಿರುದ್ಧವೇ ಸಮರ ಸಾರಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.
ಕಾರ್ಯಕ್ರಮದ ಆರಂಭದಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ ಅವರ ನೇತೃತ್ವದಲ್ಲಿ ಮರೈನ್ ಡ್ರೈವ್‌ನಿಂದ ರಾಜೇಂದ್ರ ಮೈದಾನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು