12:34 PM Monday9 - November 2026
ಬ್ರೇಕಿಂಗ್ ನ್ಯೂಸ್
ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ದೇವಿರಮ್ಮ ಬೆಟ್ಟ ಹತ್ತುವಾಗ ಕುಸಿದು ಬಿದ್ದು ದ.ಕ. ಜಿಲ್ಲೆಯ ಯುವಕ ಸಾವು

08/11/2026, 22:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ದೇವಿರಮ್ಮ ಬೆಟ್ಟ ಹತ್ತುವಾಗ ಕುಸಿದು ಬಿದ್ದು ಕನ್ಯಾಡಿಯ ಯುವಕ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕನ್ಯಾಡಿ ನಿವಾಸಿ ಲಕ್ಷ್ಮಣ್(35) ಮೃತ ಯುವಕ.
ಮಲ್ಲೇನಹಳ್ಳಿ ಕಡೆಯಿಂದ ಇರುವ ಮಾರ್ಗದಲ್ಲಿ ಬೆಟ್ಟ ಹತ್ತುತ್ತಿರುವಾಗ ಏಕಾಏಕಿ ಕುಸಿದು ಬಿದ್ದ ಲಕ್ಷ್ಮಣ್ ಮೃತಪಟ್ಟಿದ್ದಾರೆ.
ಮೃತದೇಹವನ್ನುಅಗ್ನಿಶಾಮಕ ಸಿಬ್ಬಂದಿ ಕೆಳಕ್ಕೆ ತಂದಿದ್ದು, ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಮಗಳೂರಿನ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬೆಂಗಳೂರಿನಲ್ಲಿ ಬಾಷ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ್, ಹೂವಿನಹಳ್ಳಿಯಲ್ಲಿನ ತಮ್ಮ ಭಾವನ ಮನೆಗೆ ಬಂದಿದ್ದರು. ರಾತ್ರಿ ಪ್ರಯಾಣ ಮಾಡಿ ಬಂದಿದ್ದು, ಬೆಳಗಿನ ಜಾವ ಬೆಟ್ಟ ಹತ್ತಲು ಭಾವನೊಂದಿಗೆ ಹೋಗಿದ್ದರು. ಗುಡ್ಡದಲ್ಲಿ ಬೆಳಿಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಮಂಜು ಮುಸುಕಿತ್ತು. ಇದರ ನಡುವೆ ಬೆಟ್ಟ ಹತ್ತುವಾಗ ಲಕ್ಷ್ಮಣ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮತ್ತೊಂದೆಡೆ ಮಾಣಿಕ್ಯಾಧಾರ ಜಲಪಾತದ ಭಾಗದ ಮಾರ್ಗದಲ್ಲಿ ತೆರಳುತ್ತಿದ್ದ ಮಂಡ್ಯದ ಸುನೀಲ್(31) ಎಂಬುವರು ಕಾಲುಜಾರಿ ಬಿದ್ದಿದ್ದು, ಅವರನ್ನು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಭಕ್ತರು ರಕ್ಷಣೆ ಮಾಡಿ ಮೇಲೆತ್ತಿದ್ದಾರೆ. ಅವರು ಅಸ್ವಸ್ಥಗೊಂಡಿದ್ದು, ಅವರನ್ನು ಅಗ್ನಿಶಾಮಕ ಸಿಬ್ಬಂದಿ ಹೊತ್ತು ತಂದು ಆಸ್ಪತ್ರೆಗೆ ಸಾಗಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು