12:37 PM Monday9 - November 2026
ಬ್ರೇಕಿಂಗ್ ನ್ಯೂಸ್
ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ…

ಇತ್ತೀಚಿನ ಸುದ್ದಿ

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ; ಕಾರ್ಕಳದಲ್ಲಿ 4 ಮಂದಿ ಆರೋಪಿಗಳ ಬಂಧನ

09/11/2026, 12:35

ಉಡುಪಿ(reporterkarnataka.com): ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಅಡಿಯಲ್ಲಿ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು.ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಬ್ರಹ್ಮಾವರ ವೃತ್ತ ನಿರೀಕ್ಷಕರ ವಿಶೇಷ ತಂಡವನ್ನು ರಚಿಸಲಾಗಿತ್ತು.
ಈ ತಂಡವು ನ.3ರಂದು ಮಧ್ಯಪ್ರದೇಶಕ್ಕೆ ತೆರಳಿ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಪವನ್ ಕುಮಾರ್ (24) ಹಾಗೂ ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದಿತ್ತು. ನ.5ರಂದು ಪವನ್ ಕುಮಾರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಾಲಕನನ್ನು ಸುರಕ್ಷತೆಯ ದೃಷ್ಟಿಯಿಂದ ಪರಿವೀಕ್ಷಣಾಲಯದಲ್ಲಿ ಇರಿಸಲಾಗಿದೆ.ಪ್ರಕರಣದ ಉಳಿದ ಆರೋಪಿಗಳಾದ ವರಂಗ ಗ್ರಾಮದ ಮುನಿಯಾಲು ನಿವಾಸಿಗಳಾದ ಆದರ್ಶ ಕಾಂಚನ್ ಹಾಗೂ ದಿನೇಶ್ ಶೆಟ್ಟಿ ಎಂಬವರನ್ನು ನ.7ರ ರಾತ್ರಿ ಕಾರ್ಕಳದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಉಪನಿರೀಕ್ಷಕಿ ಮುಕ್ತಾಬಾಯಿ ಮತ್ತು ಸಿಬ್ಬಂದಿ ವಶಕ್ಕೆ ಪಡೆದು ಬಂಧಿಸಿದ್ದಾರೆ.
ಬಳಿಕ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮುಂದೆ ಹಾಜರುಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು