9:43 PM Wednesday11 - November 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy…

ಇತ್ತೀಚಿನ ಸುದ್ದಿ

ಬೆಂಗಳೂರು | ಬೆಲೆಯೇರಿಕೆ ವಿರುದ್ದ ರಾಜ್ಯ ಬಿಜೆಪಿ ಬೃಹತ್ ಪ್ರತಿಭಟನೆ: ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಯತ್ನ

11/11/2026, 21:42

ಬೆಂಗಳೂರು(reporterkarnataka.com): ಜನರ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ವಿರೋಧಿಸಿ ರಾಜ್ಯ ಬಿಜೆಪಿ ಬೆಂಗಳೂರಿನ ಫ್ರಿಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದು,ನಂತರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ವಿಫಲ ಯತ್ನ ನಡೆಸಿತು.


ಪಕ್ಷದ ಎಲ್ಲ ನಾಯಕರು, ಜನಪ್ರತಿನಿಧಿಗಳು, ಪ್ರಮುಖರು, ಕಾರ್ಯಕರ್ತರೊಂದಿಗೆ ಫ್ರಿಡಂ ಪಾರ್ಕ್ ನಿಂದ ಮುಖ್ಯ ಮಂತ್ರಿಯವರ ನಿವಾಸದತ್ತ ಧಾವಿಸುವಾಗ ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಅವರನ್ನು ಬಂಧಿಸಿದರು.
ಬೃಹತ್ ಜನಾಕ್ರೋಶಕ್ಕೆ ಬೆದರಿ, ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನದ ಮೂಲಕ ಪ್ರಜಾಸತ್ತಾತ್ಮಕ ಧ್ವನಿಯನ್ನು ಅಡಗಿಸಲು ಯತ್ನಿಸುತ್ತಿರುವ ಈ ತುಘಲಕ್ ಸರ್ಕಾರದ ಬೆದರಿಕೆಗಳಿಗೆ ಅಂಜುವ ಪ್ರಶ್ನೆಯೇ ಇಲ್ಲ. ಖಜಾನೆ ಲೂಟಿ ಮಾಡಿ ಜನರ ಮೇಲೆ ಬೆಲೆಯೇರಿಕೆಯ ಗದಾ ಪ್ರಹಾರ ನಡೆಸಿರುವ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ಜನ ಸಾಮಾನ್ಯರಿಗೆ ನ್ಯಾಯ ಸಿಗುವವರೆಗೆ ನಿಲ್ಲುವುದಿಲ್ಲ. ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕರುಗಳಾದ ಮುನಿರತ್ನ, ಚೆನ್ನಬಸಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ರವಿ ಕುಮಾರ್, ಪಕ್ಷದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಸೇರಿದಂತೆ ಪಕ್ಷದ ಹಲವಾರು ನಾಯಕರು , ಜನಪ್ರತಿನಿಧಿಗಳು ಹಾಗೂ ನಮ್ಮ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು