ಇತ್ತೀಚಿನ ಸುದ್ದಿ
ಮಂಗಳೂರು | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
12/11/2026, 20:39
ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಅವಿರೋಧ ಆಯ್ಕೆ ನಡೆದಿದೆ.
ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣಾ ಪ್ರಕ್ರಿಯೆ ನಡೆಸಲಾಗಿದ್ದು, ನವೆಂಬರ್ 9ರಂದುಚುನಾವಣೆಯ ಫಲಿತಾಂಶ ಘೋಷಣೆಯಾಗಿರುವುದರಿಂದ, ನಿರ್ದೇಶಕರು ಅವಿರೋಧವಾಗಿ ಆಯ್ಕೆಗೊಂಡಿರುವ ಕಾರಣ ನವೆಂಬರ್ 15ರಂದು ಮತದಾನದ ಪ್ರಕ್ರಿಯೆ ಇರುವುದಿಲ್ಲ ಎಂದು ರಿಟರ್ನಿಂಗ್ ಅಧಿಕಾರಿಯಾದ ಎಂ. ಶಿವಲಿಂಗಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












