2:30 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಇಚ್ಛಾಶಕ್ತಿ ಮತ್ತು ಅವಕಾಶಗಳನ್ನು ಅಳವಡಿಸಿಕೊಳ್ಳಿ: ಮಂಗಳೂರು ವಿವಿ ಕುಲಪತಿ ಪ್ರೊ.ಯಡಪಡಿತ್ತಾಯ ವಿದ್ಯಾರ್ಥಿಗಳಿಗೆ ಕರೆ

25/09/2021, 13:33

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ  ಸಹ ಭಾಗಿತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯು ನಗರ ಕೆನರಾ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಜರುಗಿತು. 




ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.  ಪಿ. ಎಸ್. ಯಡಪಡಿತ್ತಾಯ  ಗಿಡ ನೆಡುವ ಮೂಲಕ  ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಮುಖ್ಯ ಅತಿಥಿಯಾಗಿ ಅವರು ಮಾತನಾಡಿ, ನಮ್ಮ ಜೀವನದಲ್ಲಿ ಇಚ್ಛಾಶಕ್ತಿ, ಸಾಮರ್ಥ್ಯ, ಹಾಗೂ ಅವಕಾಶಗಳನ್ನು ಅವಳಡಿಸಿಕೊಂಡು ನಡೆಯಿರಿ, ಯಶಸ್ಸು ನಿಮ್ಮದಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಜೀವನದ  ಮೌಲ್ಯಗಳನ್ನು ತಿಳಿಸಿಕೊಡುತ್ತದೆ. ಪಠ್ಯಕ್ರಮದ ಜೊತೆ ಸೇವೆಯನ್ನು ಮೈಗೂಡಿಸಿಕೊಳ್ಳಿ. ಸಾಂಸ್ಥಿಕ,  ಸಾಮಾಜಿಕ ಜವಾಬ್ದಾರಿಯನ್ನು ಕೆನರಾ ಕಾಲೇಜಿನ ವಿದ್ಯಾರ್ಥಿಗಳು ಹೊಂದಿರುವುದು ಹೆಮ್ಮೆಯ ವಿಷಯ ಎಂದರು. 

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯಧಿಕಾರಿ ಡಾ. ಕಿಶೋರ್ ಮಾತನಾಡಿ, ಬೇರೆಯವರ ಮುಖದಲ್ಲಿ ನಗು ತರಿಸುವುದು ಶ್ರೇಷ್ಠ ಕೆಲಸ ಹಾಗೂ ಇನ್ನೊಬ್ಬರಿಗೋಸ್ಕರ  ಬದುಕುವ  ಬದುಕು  ಅಮೂಲ್ಯ ವಾದದ್ದು ಎಂದು ಹೇಳಿದರು.


ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ ಅವಕಾಶಗಳನ್ನು ಬಳಸಿ ಕೊಳ್ಳಿ. ಸಮಾಜದಲ್ಲಿ ಉತ್ತಮ ವ್ಯಕ್ತ್ತಿಗಳಾಗಿ ಬಾಳಲು ರಾ.ಸೆ.ಯೋ ಉತ್ತಮ ವೇದಿಕೆ ಎಂದರು 


ಅಧ್ಯಕ್ಷತೆಯನ್ನು ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಕಾರ್ಯದರ್ಶಿ ಎಂ. ರಂಗನಾಥ್ ಭಟ್ ವಹಿಸಿದ್ದರು. 


ಕೆನರಾ ಕಾಲೇಜಿನ ಪ್ರಿನ್ಸಿಪಾಲ್ ಡಾ. ಪ್ರೇಮಲತಾ ವಿ., ಕೆನರಾ ಕಾಲೇಜಿನ ರಾ.ಸೆ.ಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಹಾಗೂ ಕಾವ್ಯಶ್ರೀ ಕೆ. ಉಪಸ್ಥಿತರಿದ್ದರು.



ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೆನಪೋಯ ವಿಶ್ವವಿದ್ಯಾನಿಲಯ ಕೊಡಮಾಡುವ ಯುವ ಸೇನಾ ಪ್ರಶಸ್ತಿಯನ್ನು ಪಡೆದ ಕಾಲೇಜಿನ ವಿದ್ಯಾರ್ಥಿ  ಅಭಿನ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು