2:21 PM Sunday15 - November 2026
ಬ್ರೇಕಿಂಗ್ ನ್ಯೂಸ್
ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ…

ಇತ್ತೀಚಿನ ಸುದ್ದಿ

ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್

15/11/2026, 14:16

ತುಮಕೂರು(reporterkarnataka.com):ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಯ ಕುರಿತಾದ ಚರ್ಚೆಗಳು ಆಗಾಗ ಮುನ್ನೆಲೆಗೆ ಬರುತ್ತಲೇ ಇರುತ್ತವೆ. ಇದೀಗ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತಮಗೆ ಉನ್ನತ ಹುದ್ದೆಗಳು ಕೈತಪ್ಪಿದ ವಿಚಾರವನ್ನು ವೇದಿಕೆ ಮೇಲೆಯೇ ಸ್ಮರಿಸಿ ಭಾವುಕರಾಗಿದ್ದಾರೆ. ಮತ್ತೊಂದೆಡೆ, ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳು ಕೂಡ ಪರಮೇಶ್ವರ್ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿ ಎಂದು ಆಶೀರ್ವದಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

*40 ವರ್ಷಗಳ ರಾಜಕೀಯ ಏಳು-ಬೀಳು ಸ್ಮರಿಸಿದ ಡಿಸಿಎಂ*
ತುಮಕೂರಿನ ಎಸ್.ಎಸ್. ಸ್ಕ್ವೇರ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಡಾ. ಜಿ. ಪರಮೇಶ್ವರ್, ತಮ್ಮ ಸುದೀರ್ಘ ರಾಜಕೀಯ ಪಯಣವನ್ನು ಮೆಲುಕು ಹಾಕಿದರು. “1989ರಲ್ಲಿ ನಾನು ಈ ಜಿಲ್ಲೆಗೆ ಶಾಸಕನಾಗಿ ಬಂದೆ. ವಿದೇಶದಲ್ಲಿ ವ್ಯಾಸಂಗ ಮಾಡಿ ಬಂದಿದ್ದ ನನಗೆ ರಾಜಕಾರಣ ಸಂಪೂರ್ಣ ಹೊಸದಾಗಿತ್ತು. ಕಳೆದ 40 ವರ್ಷಗಳ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದೇನೆ. ಹಲವು ಸಂದರ್ಭಗಳಲ್ಲಿ ನನಗೆ ಸಿಗಬೇಕಿದ್ದ ಉನ್ನತ ಹುದ್ದೆಗಳು ಕೈತಪ್ಪಿ ಹೋಗಿವೆ. ಆ ನೋವನ್ನು ನಾನು ಅನುಭವಿಸಿದ್ದೇನೆ” ಎಂದು ಭಾವುಕರಾಗಿ ನುಡಿದರು.
“ಜಿಲ್ಲೆಯ ಜನರ ಆಶೀರ್ವಾದದಿಂದ ಹಲವು ಬಾರಿ ಸಚಿವನಾಗಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದೇನೆ. ರಾಜ್ಯದಲ್ಲಿ ಎರಡು ಬಾರಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ. ನಾವ್ಯಾರೂ ಇಲ್ಲಿ ಶಾಶ್ವತವಲ್ಲ, ಒಂದಲ್ಲ ಒಂದು ದಿನ ನಿರ್ಗಮಿಸಲೇಬೇಕು. ಆದರೆ ಇರುವಷ್ಟು ದಿನ ಜನರು ಸ್ಮರಿಸುವಂತಹ ಕೆಲಸ ಮಾಡಬೇಕು. ಶಿಕ್ಷಣ ಕ್ಷೇತ್ರದ ಕನಸಿನೊಂದಿಗೆ ತುಮಕೂರು ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದು, ಇಂದು ಸಾವಿರಾರು ವಿದ್ಯಾರ್ಥಿಗಳು ಅಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ” ಎಂದು ಅವರು ತಿಳಿಸಿದರು.

*ಪರಮೇಶ್ವರ್ ಮುಖ್ಯಮಂತ್ರಿ ಆಗ್ತಾರೆ ಎಂದ ಸಿದ್ದಗಂಗಾ ಶ್ರೀಗಳು*
ಇದೇ ವೇಳೆ ತುಮಕೂರಿನಲ್ಲಿ ನಡೆದ ಎಲ್‌ಇಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದಗಂಗಾ ಮಠದ ಶ್ರೀಗಳು, ಪರಮೇಶ್ವರ್ ಅವರ ಸಿಎಂ ಸ್ಥಾನದ ಕುರಿತು ಮಹತ್ವದ ಮಾತುಗಳನ್ನಾಡಿದರು. “ಇಂದು ನಮ್ಮ ಪರಮೇಶ್ವರ್ ಅವರು ಮುಖ್ಯಮಂತ್ರಿಯಲ್ಲ, ಉಪಮುಖ್ಯಮಂತ್ರಿಗಳಾಗಿದ್ದಾರೆ. ಅದು ಆಗಬೇಕಿರುವ ಕೆಲಸ ಬಾಕಿಯಿದೆ. ಸಿಎಂ ಆಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಮುಂದಿನ ದಿನಗಳಲ್ಲಿ ಅವರಿಗೆ ಆ ಅವಕಾಶ ಲಭಿಸಲಿ” ಎಂದು ಶ್ರೀಗಳು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು