ಇತ್ತೀಚಿನ ಸುದ್ದಿ
ಮಂಗಳೂರು | ಪಾಲ್ದನೆ ಚರ್ಚ್ ನಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ
16/11/2026, 11:30
ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಇಂದು ರವಿವಾರ ನಡೆಯಿತು.
ಚರ್ಚ್ ವ್ಯಾಪ್ತಿಯ 1ನೇ ತರಗತಿಯಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ ಬಲಿಪೂಜೆಯ ಬಳಿಕ ಚರ್ಚ್ ನ ತೆರೆದ ಮೈದಾನದಲ್ಲಿ ಆಟೋಟಗಳನ್ನು ಮತ್ತು ವಿವಿಧ ಸ್ಪರ್ಧೆಗಳನ್ನು , ಮನೋರಂಜನಾ ನೃತ್ಯಗಳನ್ನು ಆಯೋಜಿಸಲಾಗಿತ್ತು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಮಾತನಾಡಿ ಮಕ್ಕಳು ದೇವರಿಗೆ ಅತ್ಯಂತ ಪ್ರಿಯರು. ಮಕ್ಕಳ ದಿನಾಚರಣೆ ಕಾರ್ಯಕ್ರಮವು ಮಕ್ಕಳಿಗೆ ಪರಸ್ಪರ ಬೆರೆತು ತಮ್ಮ ಪ್ರತಿಭೆಗಳನ್ನು ಹೊರ ಸೂಸಲು ಸಹಾಯಕ ಎಂದರು.
ಚರ್ಚ್ ನ ಸಹಾಯಕ ಧರ್ಮ ಗುರು ವಂದನೀಯ ಫಾ. ಜೋಸೆಫ್ ಕುವೆಲ್ಲೊ, ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ರೋಷನ್ ಮೊಂತೇರೊ, ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಲೋಬೊ, ಕುಟುಂಬ ಹಿತಾಸಕ್ತಿ ಈ ಆಯೋಗದ ಸಂಚಾಲಕಿ ಸೆಲಿನ್ ಡಿ ಸೋಜಾ ಮುಂತಾದವರು ಉಪಸ್ಥಿತರಿದ್ದರು. ಸಹ ಭೋಜನದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.












