ಇತ್ತೀಚಿನ ಸುದ್ದಿ
ಉತ್ತರಾಖಂಡ | ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿದ ಬಸ್: 8 ಸಾವು, 26 ಮಂದಿಗೆ ಗಂಭೀರ ಗಾಯ
17/11/2026, 13:32
ಲಕ್ನೋ(reporterkarnataka.com): ಉತ್ತರಾಖಂಡದ ತೆಹ್ರಿ ಗಢವಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಬಸ್ ಉರುಳಿದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 26 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಗುಲಾರ್ ಬಜಾರ್ ಬಳಿ ಮುಂಜಾನೆ 4.30ರ ಸುಮಾರಿಗೆ ಈ ದುರಂತ ಸಂಭವಿಸಿದೆ.ರಸ್ತೆಯಿಂದ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿದೆ ಎಂದು ಮೂಲಗಳು ತಿಳಿಸಿವೆ.
ಬಸ್ ಹರಿದ್ವಾರದಿಂದ ಚಮೋಲಿ ಜಿಲ್ಲೆಯ ಕರ್ಣಪ್ರಯಾಗಕ್ಕೆ ತೆರಳುತ್ತಿತ್ತು. ಬಸ್ನಲ್ಲಿ 30ರಿಂದ 35 ಪ್ರಯಾಣಿಕರಿದ್ದರು ಎನ್ನಲಾಗಿದೆ.
ಬಸ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ನಡೆದಿದೆ. ಏಳು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ರಿಷಿಕೇಶದ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ದುರ್ಗಮ ಪ್ರದೇಶವಾಗಿದ್ದ ಕಾರಣ ಗಾಯಾಳುಗಳನ್ನು ಸ್ಟ್ರೆಚರ್ಗಳ ಮೇಲೆ ರಸ್ತೆಬದಿಗೆ ಹೊತ್ತು ತಂದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ಗಳ ಮೂಲಕ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ಸ್ಥಳೀಯ ಪೊಲೀಸರು, ಎಸ್ಡಿಆರ್ಎಫ್ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.












