5:21 PM Friday20 - November 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ…

ಇತ್ತೀಚಿನ ಸುದ್ದಿ

Kodagu | ಗಾಂಜಾ ಮಾರಾಟಕ್ಕೆ ಯತ್ನ: ವ್ಯಕ್ತಿ ಬಂಧನ

20/11/2026, 17:17

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ಚೌಡ್ಲು ಗ್ರಾಮದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇರೆಗೆ ಸೋಮವಾರಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ 45 ಗ್ರಾಂ ಗಾಂಜಾ ಸಹಿತ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.
ಬಂಧಿತನನ್ನು ರಾಜು ಎಚ್.ಎಂ. (65) ಎಂದು ಗುರುತಿಸಲಾಗಿದೆ.
ಈತ ಮೂಲತಃ ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದವರು. ಪ್ರಸ್ತುತ ಶನಿವಾರಸಂತೆ ಸಮೀಪದ ಮಾಲಂಬಿ ಗ್ರಾಮದಲ್ಲಿ ವಾಸವಾಗಿದ್ದಾರೆ. ಮಾಲಂಬಿ ಗ್ರಾಮದಿಂದ
ಗಾಂಜಾವನ್ನು ತಂದು ಚೌಡ್ಲು ಗ್ರಾಮದಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪೊಲೀಸ್ ಇನ್ಸ್‌ಪೆಕ್ಟರ್ ಮುದ್ದು ಮಹದೇವ, ಸಬ್‌ಇನ್ಸ್‌ಪೆಕ್ಟರ್ ಖಾತಿಜ ಹಾಗೂ ಸಿಬ್ಬಂದಿಗಳಾದ ಧನಂಜಯ, ಅರುಣ್ ಮತ್ತು ಪ್ರದೀಪ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು