11:28 PM Friday20 - November 2026
ಬ್ರೇಕಿಂಗ್ ನ್ಯೂಸ್
ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್…

ಇತ್ತೀಚಿನ ಸುದ್ದಿ

ಮಂಗಳೂರು ತಾಲೂಕು ಗ್ಯಾರಂಟಿ ಯೋಜನೆಗಳ ನೂತನ ಅಧ್ಯಕ್ಷ ಅಲೆಸ್ಟೈನ್‌ ಕ್ಲೈವ್‌ ಡಿಕುನ್ಹಾ ಪದಗ್ರಹಣ

20/11/2026, 23:27

ಮಂಗಳೂರು(reporterkarnataka.com): ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮಂಗಳೂರು ತಾಲೂಕು ಅನುಷ್ಠಾನ ಸಮಿತಿಗೆ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಲೆಸ್ಟೈನ್‌ ಕ್ಲೈವ್‌ ಡಿಕುನ್ಹಾ ಅವರ ಪದಗ್ರಹಣ ಸಮಾರಂಭ ಮಂಗಳೂರು ತಾಲೂಕು ಪಂಚಾಯತ್‌ ನ ಗ್ಯಾರಂಟಿ ಸಮಿತಿ ಕಚೇರಿಯಲ್ಲಿ ನೆರವೇರಿತು.
ಈ ವೇಳೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರ್ನಾಟಕ ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜಾ ಅವರು ನೂತನ ಅಧ್ಯಕ್ಷರಿಗೆ ಶಾಲು ಹೊದಿಸುವ ಮೂಲಕ ಅಭಿನಂದಿಸಿದರು. ಬಳಿಕ ಮಾತನಾಡಿದ ಅವರು, ನಿಕಟಪೂರ್ವ ಅಧ್ಯಕ್ಷರಾಗಿದ್ದ ಸುರೇಂದ್ರ ಬಿ. ಕಂಬಳಿ ಅವರು ಈ ವರೆಗೆ ಉತ್ತಮವಾಗಿ ಕೆಲಸ ಮಾಡಿದ್ದು, ಈ ಮೊದಲು ನಡೆದಿದ್ದ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶವೇ ಉತ್ತಮ ಉದಾಹರಣೆ. ಅವರು ಅಧ್ಯಕ್ಷ ಸ್ಥಾನಕ್ಕೆ ನ್ಯಾಯ ಕೊಟ್ಟಿದ್ದಾರೆ. ಹಾಗೆಯೇ ಇನ್ನು ಮುಂದೆಯೂ ಅಲೆಸ್ಟೈನ್‌ ಕ್ಲೈವ್‌ ಡಿಕುನ್ಹಾ ಅವರು ಉತ್ತಮ ಕಾರ್ಯನಿರ್ವಹಿಸಲಿದ್ದಾರೆ ಎಂಬ ಆಶಯ ನನಗಿದೆ ಎಂದು ಅವರಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಸುರೇಂದ್ರ ಬಿ. ಕಂಬಳಿ, ಸ್ಟ್ಯಾನಿ ಅಲ್ವಟ್ಸ್, ಶ್ಯಾಲೆಟ್ ಪಿಂಟೂ, ಪದ್ಮರಾಜ್ ಆರ್ ಪೂಜಾರಿ, ನಾಗೇಂದ್ರ ಕುಮಾರ್ ಜಪ್ಪಿನಮೊಗರು, ಅಪ್ಪಿ, ಮೀನಾ ಟೆಲ್ಲೀಸ್, ಲಿವಿಟ ನೊರೆನ್ಹಾ, ಅನಿತಾ ಡಿ ಸೋಜಾ, ಕವಿತಾ ವಾಸು, ಶಶಿಕಲಾ ಪದ್ಮನಾಭ, ಯುಪಿ ಇಬ್ರಾಹಿಂ, ರಚನಾ ಅಧ್ಯಕ್ಷರಾದ ಜಾನ್ ಮೊಂತೆರೋ, ಎಮ್ ಸಿಸಿ ಬ್ಯಾಂಕ್ ನ ಮುಖ್ಯಸ್ಥರಾದ ಅನಿಲ್ ಲೋಬೋ, ಮಾಜಿ ಮೇಯರ್ ಶಶಿಧರ್ ಹೆಗಡೆ ಹಾಗೂ ಹಲವಾರು ಗಣ್ಯರು ಮತ್ತು ಗ್ಯಾರಂಟಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು