ಇತ್ತೀಚಿನ ಸುದ್ದಿ
ಅಂಚೆ ಮತ ಮರು ಎಣಿಕೆ ಪ್ರಕರಣ: ಮಾಜಿ ಸಚಿವ ಜೀವರಾಜ್ ವಿರುದ್ಣದ ಕ್ರಿಮಿನಲ್ ಪ್ರಕರಣ ಹೈಕೋರ್ಟ್ ರದ್ದು
22/11/2026, 13:06
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಎನ್.ಜೀವರಾಜ್ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರಾಜ್ಯ ಹೈಕೋರ್ಟ್ ರದ್ದು ಮಾಡಿದೆ.
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಜೀವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮುರೋಳ್ಳಿ
ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿತ್ತು.
ಜೀವರಾಜ್ ವಿರುದ್ಧ ಅಕ್ರಮ-ಕ್ರಿಮಿನಲ್-ವಂಚನೆ-ಅಪರಾಧ ಎಂದು ಕೇಸ್ ದಾಖಲಿಸಲಾಗಿತ್ತು. 2023ರ ವಿಧಾನಸಭಾ ಚುನಾವಣಾ ಮತ ಎಣಿಕೆ ಪ್ರಶ್ನಿಸಿ ಕೋರ್ಟ್ ಮೊರೆ ಜೀವರಾಜ್ ಹೋಗಿದ್ದರು.
201 ಮತಗಳ ಅಂತರದಿಂದ ಸೋತಿದ್ದ ಜೀವರಾಜ್ ಕೋರ್ಟ್ ಮೊರೆ ಹೋಗಿದ್ರು. ಕೋರ್ಟ್ ತಿರಸ್ಕೃತ 279 ಮತಗಳ ಪರಿಶೀಲನೆ ಹಾಗೂ ಅಂಚೆ ಮತ ಮರು ಎಣಿಕೆಗೆ ಸೂಚಿಸಿತ್ತು. ಮೇ 2ರಂದು ನಡೆದಿದ್ದ ಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್ 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಪ್ರಕರಣದ ರದ್ದು ಕೋರಿ ಜೀವರಾಜ್ ಹೈ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯಪೀಠ ಪ್ರಕರಣವನ್ನ ರದ್ದುಗೊಳಿಸಿದೆ.












