1:08 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಅಥಣಿ: ಹುಲಿ ಹುಡುಕಿಕೊಂಡು ಹೋದ ಗ್ರಾಮಸ್ಥರಿಗೆ ಸಿಕ್ಕಿದ್ದು ಕಾಡುಕೋಣ!: 4 ದಿನಗಳ ಸತತ ಕಾರ್ಯಾಚರಣೆ ಬಳಿಕ ಸೆರೆ!

25/09/2021, 14:45

ರಾಹುಲ್ ಅಥಣಿ ಬೆಳಗಾವಿ 

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕಾಡು ಕೋಣವನ್ನು ಬಂಧಿಸುವಲ್ಲಿ, ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಗ್ರಾಮದಲ್ಲಿ ಕಾಡುಕೋಣ ಕಾಣಿಸಿಕೊಂಡು ಭಯ ಭೀತಿ ಉಂಟು ಮಾಡಿತ್ತು. ಸ್ಥಳಿಯರು ಹಾಗೂ ಅರಣ್ಯ ಇಲಾಖೆ ಅಧಿಕಾರಿ ನೇತೃತ್ವದಲ್ಲಿ ಕಾಡು ಕೋಣವನ್ನು ಸೆರೆಹಿಡಿಯಲಾಗಿದೆ. ಗ್ರಾಮದಲ್ಲಿ ಇತ್ತೀಚಿಗೆ ಹುಲಿ ಬಂದಿದೆಯೆಂದು ಶಂಕೆ ವ್ಯಕ್ತವಾಗಿದ್ದು, ಹುಲಿ ಹುಡುಕಾಟದಲ್ಲಿ ಕಾಡುಕೋಣ ಪತ್ತೆಯಾಗಿದೆ. ಹರಸಾಹಸಪಟ್ಟು ಗ್ರಾಮಸ್ಥರು ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಕಾಡುಕೋಣ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

1.5 ಟನ್ ತೂಕದ ಬೃಹತಾಕಾರದ ಕಾಡುಕೋಣ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು, ಹಲವಾರು ಬೆಳೆಗಳನ್ನು ನಾಶಪಡಿಸುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮೈಸೂರಿನ ಮೃಗಾಲಯದ

ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಬೆಳಗಾವಿ ಅರಣ್ಯ ಇಲಾಖೆ ಅರಣ್ಯಾಧಿಕಾರಿಗಳಾದ ಅಂಥೋನಿ ಮರಿಯಪ್ಪ, ಮತ್ತು ಪ್ರಶಾಂತ್ ಗಾಣಿಗೇರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳು ಸತತ ನಾಲ್ಕು ದಿನ ಕಾರ್ಯಾಚರಣೆ ನಡೆಸಿ ಕಾಡು ಕೋಣವನ್ನು ಸೆರೆಹಿಡಿದಿದ್ದಾರೆ. 

ಈ ಭಾಗದಲ್ಲಿ ಕಾಡುಕೋಣ ಕಾಣಿಸಿಕೊಳ್ಳುವುದು ಅಪರೂಪ. ಸುತ್ತಮುತ್ತ 100 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾಡುಕೋಣ ಕಾಣಿಸಿಸುದಿಲ್ಲ, ಖಾನಾಪುರ ಕಾಡಿನಲ್ಲಿ ಕಾಡು ಕೋಣಗಳಿವೆ, ಆದರೂ ಅಥಣಿ ತಾಲೂಕಿನ ಬಯಲುಸೀಮೆಯಲ್ಲಿ ಕಾಡುಕೋಣ ಬಂದಿರೋದು ಅಪರೂಪದ ಘಟನೆಯೆಂದು ಅಥಣಿ ಅರಣ್ಯ ಇಲಾಖೆ ಪ್ರಶಾಂತ ಗಾಣಿಗೇರ್ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡರು. ಸದ್ಯ ಕಾಡುಕೋಣ ಆರೋಗ್ಯವಂತ ಆಗಿದೆ, ಮೈಸೂರು ಮೃಗಾಲಯಕ್ಕೆ ಕಾಡುಕೋಣವನ್ನು ರವಾನೆ ಮಾಡಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು