5:57 PM Sunday22 - November 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್ ನಲ್ಲಿ ವಾರ್ಷಿಕ ಕ್ರೀಡೋತ್ಸವ

22/11/2026, 17:56

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾರ್ಷಿಕ ಕ್ರೀಡೋತ್ಸವ ಇಂದು ನಡೆಯಿತು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಬ್ಯಾಟಿಂಗ್ ಮಾಡಿ ಮೊದಲ ಚೆಂಡನ್ನು ಬೌಂಡರಿಗೆ ಎಸೆದು ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ ಕ್ರೀಡಾ ಚಟುವಟಿಕೆಗಳು ಚರ್ಚ್ ನ ಎಲ್ಲಾ ವಾರ್ಡ್ ಗಳ ಸದಸ್ಯರು ಪರಸ್ಪರ ಬೆರೆತು ಬಾಂಧವ್ಯವನ್ನು ಬಲ ಪಡಿಸಲು ಸಹಕಾರಿಯಾಗುತ್ತದೆ. ಚರ್ಚ್ ನ ಯುವ ಜನರ ಒಗ್ಗಟ್ಟು ಬಲಪಡಿಸಲು ಪೂರಕವಾಗುತ್ತದೆ ಎಂದರು.
ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ರೋಷನ್ ಮೊಂತೇರೊ, ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಲೋಬೊ , ಸಾಂಸ್ಕೃತಿಕ ಸಮಿತಿಯ ಸಂಚಾಲಕ ಮಾರಿಯೋ ರೇಗೊ, ಚರ್ಚ್ ನ ಆರ್ಥಿಕ ಸಮಿತಿಯ ಸದಸ್ಯ ಮೆಲ್ವಿನ್ ಡಿ ಸೋಜಾ, ಸಾಂಸ್ಕೃತಿಕ ಸಮಿತಿಯ ಸದಸ್ಯರಾದ ವ್ಯಾಲೆಂಟೈನ್ ರೊಡ್ರಿಗಸ್, ಪ್ರೆಸಿಲ್ಲಾ ಫೆರ್ನಾಂಡಿಸ್, ಕ್ಲಿಫರ್ಡ್ ರೊಡ್ರಿಗಸ್, ಅವಿನಾಶ್ ಲೋಬೊ, ಆಶಾ ವೇಗಸ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು