8:53 PM Sunday22 - November 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು…

ಇತ್ತೀಚಿನ ಸುದ್ದಿ

*ಪ್ರತಿಭಟನೆ ಕೈಬಿಡಿ, ಅಧಿವೇಶನದ ಬಳಿಕ ಸಿಹಿಸುದ್ದಿ ಕೊಡ್ತೀವಿ: ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ಖಾದರ್ ಮನವಿ*

22/11/2026, 20:53

ಬೀದರ್‌(reporterkarnataka.com): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 6ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಪ್ರತಿಭಟನೆಯನ್ನು ತಕ್ಷಣವೇ ಕೈಬಿಡುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಆಶಾ ಕಾರ್ಯಕರ್ತೆಯರಿಗೆ ಮನವಿ ಮಾಡಿದ್ದಾರೆ. ಸರ್ಕಾರದ ಮೇಲೆ ವಿಶ್ವಾಸವಿಟ್ಟು ಸ್ವಲ್ಪ ಕಾಲಾವಕಾಶ ನೀಡಿದರೆ, ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಿಹಿಸುದ್ದಿ ನೀಡುವುದಾಗಿ ಭರವಸೆ ನೀಡಿದ್ದಾರೆ.
ಬೀದರ್‌ನಲ್ಲಿ ಮಾತನಾಡಿದ ಸಚಿವ ಯು.ಟಿ. ಖಾದರ್, ಆಶಾ ಕಾರ್ಯಕರ್ತೆಯರ ಹೋರಾಟ ಹಾಗೂ ಸರ್ಕಾರದೊಂದಿಗಿನ ಸಂಧಾನ ವಿಫಲವಾದ ವಿಚಾರವಾಗಿ ಪ್ರತಿಕ್ರಿಯಿಸಿದರು. ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಕುಟುಂಬದ ಸದಸ್ಯರಿದ್ದಂತೆ. ಗ್ರಾಮ ಮಟ್ಟದಲ್ಲಿ ಆರೋಗ್ಯ ಇಲಾಖೆಯ ಬಹುತೇಕ ಕೆಲಸಗಳನ್ನು ಅವರು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಅವರ ಸೇವೆ ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ವಿಶೇಷ ಕಾಳಜಿ ಇದೆ ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯಕರ್ತೆಯರು ಹೆಚ್ಚುವರಿ 15 ಸಾವಿರ ರೂಪಾಯಿ ಗೌರವಧನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಅವರೊಂದಿಗೆ ದೀರ್ಘಕಾಲ ಚರ್ಚೆ ನಡೆಸಿರುವುದಾಗಿ ಸಚಿವರು ಹೇಳಿದರು.
ಪ್ರಸ್ತುತ ಕೇಂದ್ರ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ 2 ಸಾವಿರ ರೂಪಾಯಿ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಇದಕ್ಕಿಂತ ಹೆಚ್ಚಿನ ನೆರವು ದೊರೆಯುತ್ತಿಲ್ಲ. ರಾಜ್ಯ ಸರ್ಕಾರ ತನ್ನ ವತಿಯಿಂದ 5 ಸಾವಿರ ರೂಪಾಯಿ ನೀಡುತ್ತಿದೆ ಎಂದು ಖಾದರ್ ವಿವರಿಸಿದರು. ಆದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು