ಇತ್ತೀಚಿನ ಸುದ್ದಿ
ಮಂಗಳೂರು | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ‘ಉತ್ತಮ ಸಹಕಾರ ಸಂಘ’ ಪ್ರಶಸ್ತಿ
23/11/2026, 10:31
ಮಂಗಳೂರು(reporterkarnataka.com): ಅಖಿಲ ಭಾರತ ಸಹಕಾರ ಸಪ್ತಾಹ 2026 ಇದರ ಪ್ರಯುಕ್ತ ನಡೆದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನೆರವೇರಿತು.
ಈ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಲಕ್ಷ್ಮಣ ಸಂಗಪ್ಪ ಸವದಿಯವರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ಅವರ ಗೌರವ ಉಪಸ್ಥಿತಿಯಲ್ಲಿ ಇತರೆ ಗಣ್ಯರ ಸಮ್ಮುಖದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅನನ್ಯ ಸೇವೆಗೆ, 2026ನೇ ಸಾಲಿನ “ಉತ್ತಮ ಸಹಕಾರ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಿಗೆ ನೀಡಿ ಗೌರವಿಸಿದರು. ಸಹಕಾರ ಕ್ಷೇತ್ರದಲ್ಲಿ ನಿರಂತರ ಸಾಧಿಸುತ್ತಾ ಬಂದಿರುವ ಅಪರಿಮಿತ ಯಶಸ್ಸಿನ ಫಲವಾಗಿ ಸಂಘವು ಸತತ 9ನೇ ಬಾರಿಗೆ “ಉತ್ತಮ ಸಹಕಾರ ಸಂಘ” ಪ್ರಶಸ್ತಿಯನ್ನು ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮುಡಿಗೇರಿಸಿಕೊಳ್ಳುತ್ತಿರುವುದು ಉಲ್ಲೇಖನೀಯವಾಗಿದೆ.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಯು.ಟಿ ಖಾದರ್ ಪರೀದ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷ ಶ್ರೀ ಜಿ.ಟಿ. ದೇವೇಗೌಡ , ಸಂಸದರಾದ ಕ್ಯಾಪ್ಟನ್ ಶ್ರೀ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಶ್ರೀ ಯಶ್ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯ ಶ್ರೀ ಐವನ್ ಡಿಸೋಜ, ನಬಾರ್ಡ್ ನ ಮುಖ್ಯ ಮಹಾಪ್ರಬಂಧಕರಾದ ಡಾ. ಸುರೇಂದ್ರ ಬಾಬು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆ, ಸಹಕಾರ ಸಂಘಗಳ ನಿಬಂಧಕರಾದ ಶ್ರೀ ವೆಂಕಟೇಶ್ ಎಮ್. ವಿ, ಸಹಕಾರ ಸಂಘಗಳ ಅಪರ ನಿಬಂಧಕರಾದ ಶ್ರೀ ಪ್ರಸಾದ್ ರೆಡ್ಡಿ ಪಿ., ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶ್ರೀ ಶಶಿಧರ್ ಪಿ., ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ರಮೇಶ್ ಎಚ್.ಎನ್., ಉಡುಪಿ ಸಹಕಾರ ಸಂಘಗಳ ಉಪನಿಬಂಧಕಿಯಾದ ಶ್ರೀಮತಿ ಲಾವಣ್ಯಾ ಕೆ . ಆರ್., ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎಸ್. ನವೀನ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶ್ರೀ ಟಿ.ಜಿ ರಾಜರಾಮ್ ಭಟ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ವಾದಿರಾಜ ಶೆಟ್ಟಿ, ಶ್ರೀ ಎಸ್.ಬಿ. ಜಯರಾಮ ರೈ, ಶ್ರೀ ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಎಸ್. ಬಿ. ಜಯರಾಮ ರೈ, ಶ್ರೀ ಎಮ್. ಮಹೇಶ್ ಹೆಗ್ಡೆ, ಶ್ರೀ ಮೋನಪ್ಪ ಶೆಟ್ಟಿ, ಶ್ರೀ ಜೈರಾಜ್ ಬಿ. ರೈ, ಶ್ರೀ ಕುಶಾಲಪ್ಪ ಗೌಡ, ಶ್ರೀ ಎಸ್.ಎನ್.ಮನ್ಮಥ, ಶ್ರೀ ರಾಜೇಶ್ ರಾವ್, ಶ್ರೀ ಸದಾಶಿವ ಉಳ್ಳಾಲ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಕೆ. ಗೋಪಾಲಕೃಷ್ಣ ಭಟ್, ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ರಮಾನಾಥ್ ಸನಿಲ್, ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಗೋಪಾಲ್ ಎಮ್. ಶ್ರೀ ಆನಂದ ಕೆ., ಶ್ರೀ ಗಣೇಶ್, ಶ್ರೀ ಎಮ್.ಪಿ ರವಿಶಂಕರ್, ಶ್ರೀ ಶ್ರೀಕಾಂತ್ ಸುವರ್ಣ, ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ಹಾಜರಿದ್ದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.) ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್ಗಳು, ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಹಾಗೂ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಐಕಳಬಾವ ಶ್ರೀ ದೇವಿಪ್ರಸಾದ ಶೆಟ್ಟಿ, ಸ್ವಾಗತಿಸಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಶಶಿ ಕುಮಾರ್ ರೈ ಬಾಲ್ಯೊಟ್ಟು ರವರು ವಂದಿಸಿದರು. ಶ್ರೀ ನಿತೇಶ್ ಶೆಟ್ಟಿ ಎಕ್ಕಾರು ನಿರೂಪಿಸಿದರು.












