4:40 PM Monday23 - November 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು…

ಇತ್ತೀಚಿನ ಸುದ್ದಿ

ಮಂಗಳೂರು | ಸಂತ ತೆರೆಜಾ ಚರ್ಚಿನ ಕ್ರೈಸ್ಟ್ ದಿ ಕಿಂಗ್ ವಾರ್ಡಿನ ವಾರ್ಷಿಕೋತ್ಸವ

23/11/2026, 16:34

ಮಂಗಳೂರು(reporterkarnataka.com): ಮಂಗಳೂರಿನ ಸಂತ ತೆರೆಜಾ ಚರ್ಚಿನ ಕ್ರೈಸ್ಟ್ ದಿ ಕಿಂಗ್ ವಾರ್ಡಿನ ವಾರ್ಷಿಕೋತ್ಸವವನ್ನು ವಾರ್ಡಿನ ಸದಸ್ಯ ವಲೇರಿಯನ್ ಬ್ರಾಗ್ಸ್ ಹಾಗೂ ನಿಶಾ ಬ್ರಾಗ್ಸ್ ಅವರ ತೆರೆದ ಮೈದಾನದಲ್ಲಿ ಆಚರಿಸಲಾಯಿತು.
ಬೆಳಗ್ಗೆ ಬಲಿಪೂಜೆ, ಸಂಜೆ ಸಭಾ ಕಾರ್ಯಕ್ರಮ ನಡೆಯಿತು. ಚರ್ಚಿನ ಪ್ರಧಾನ ಧರ್ಮಗುರುಗಳಾದ ರೆ.ಫಾ.ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಮಾತನಾಡಿ, ವಾರ್ಡಿನ ಸದಸ್ಯರ ಕಾರ್ಯವೈಖರಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ವಾರ್ಡ್ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಚರ್ಚಿನ ಸಹಾಯಕ ಗುರುಗಳಾದ ವಂ.ಫಾ.ಜೋಸೆಫ್ ಕುವೆಲ್ಲೊ, ಸ್ಥಳೀಯ ಕಾರ್ಪೊರೇಟರ್ ಭಾಸ್ಕರ್ ಕೆ, ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡೀಸ್, ಕಾರ್ಯದರ್ಶಿ ರೋಶನ್ ಮೊಂತೇರೊ, ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಮೊಂತೇರೊ, ಸ್ಥಳೀಯ ಕಾನ್ವೆಂಟಿನ ಮುಖ್ಯಸ್ಥರಾದ ಸಿ.ಮೊಂತಿ, ಸಿ.ವಿಭಾ ಉಪಸ್ಥಿತರಿದ್ದರು.
ವಾರ್ಡಿನ ಮುಖ್ಯಸ್ಥ ಡೋನಾ ಡಿಸೋಜ ಸ್ವಾಗತಿಸಿದರು. ಪ್ರತಿನಿಧಿಗಳಾದ ಸುನೀತಾ ಫೆರ್ನಾಂಡೀಸ್, ರೀಟಾ ನೊರೊನ್ಹಾ‌ ಸಹಕರಿಸಿದರು. ನಿಶಾ ಬ್ರಾಗ್ಸ್ ವರದಿ ವಾಚಿಸಿದರು. ರಾಯನ್ ಮಾರ್ಸೆಲ್ ನೊರೊನ್ಹಾ ಹಾಗೂ ಟೀನಾ ಪಿಂಟೊ ನಿರೂಪಿಸಿದರು. ಬಳಿಕ ಮನೋರಂಜನಾ ಕಾರ್ಯಕ್ರಮ, ಸಹಭೋಜನ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು