2:12 PM Wednesday25 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

Kodagu | ಪುತ್ತರಿ ಹಬ್ಬಕ್ಕೆ ನ. 26ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ

25/11/2026, 14:01

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಜ್ಯ ಸರ್ಕಾರವು 2025ರ ನವಂಬರ್ ತಿಂಗಳಲ್ಲಿ ಪ್ರಕಟಿಸಿರುವ 2026ನೇ ಸಾಲಿನ ಸಾರ್ವತ್ರಿಕ ರಜೆಗಳ ಪಟ್ಟಿಯಲ್ಲಿ ನ. 26ರಂದು ಗುರುವಾರ ಕೊಡಗಿನ ಸಾಂಪ್ರದಾಯಿಕ ಹಬ್ಬ ಪುತ್ತರಿ ಹಬ್ಬಕ್ಕೆ ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿ ಸ್ಥಳೀಯ ಸಾರ್ವಜನಿಕ ರಜೆಯನ್ನು ಘೋಷಣೆ ಮಾಡಿದೆ.
ನ. 25ರಂದು ರಾತ್ರಿ ರೋಹಿಣಿ ನಕ್ಷತ್ರದಲ್ಲಿ ಪಾಡಿ ಶ್ರೀ ಇಗ್ಗುತಪ್ಪ ದೇವಸ್ಥಾನದಲ್ಲಿ ಕದಿರು ತೆಗೆದ ಬಳಿಕ ಪುತ್ತರಿ ಹಬ್ಬಕ್ಕೆ ಚಾಲನೆ ಸಿಗಲಿದೆ. ಮರುದಿನವೂ ಕೊಡಗಿನ ಜನತೆ ಪುತ್ತರಿ ಹಬ್ಬಾಚರಣೆಯಲ್ಲಿ ತೊಡಗುವುದರಿಂದ ನ. 25ರ ಬದಲಿಗೆ ನ. 26ರಂದು ಕೊಡಗು ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ ಎನ್ನಲಾಗಿದೆ. ಈ ಹಿನ್ನೆಲೆ ನ. 26ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು