9:53 PM Wednesday25 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

ಮೇರಮಜಲು: ಪುರಾತನ ಇತಿಹಾಸ ಪ್ರಸಿದ್ಧ ಪವಿತ್ರ ಕುಟುಂಬ ದೇವಾಲಯದಲ್ಲಿ ವಾರ್ಷಿಕ ಹಬ್ಬದ ಸಂಭ್ರಮ

25/11/2026, 21:53

ಒಮ್ಜೂರ್–ಮೇರಮಜಲು(reporterkarnataka.com): ಪುರಾತನ ಇತಿಹಾಸ ಹಾಗೂ ಧಾರ್ಮಿಕ ಪರಂಪರೆಯನ್ನು ಹೊಂದಿರುವ ಒಮ್ಜೂರ್–ಮೇರಮಜಲಿನ ಪವಿತ್ರ ಕುಟುಂಬ ದೇವಾಲಯದಲ್ಲಿ ನವೆಂಬರ್ 25ರಂದು ವಾರ್ಷಿಕ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ಪ್ರಯುಕ್ತ ನಡೆದ ಪವಿತ್ರ ಬಲಿಪೂಜೆಯನ್ನು ಬಂಟ್ವಾಳ ವಲಯದ ಪ್ರಧಾನ ಗುರುಗಳಾದ ವಂ. ಫಾ. ವಿಕ್ಟರ್ ಡಿಸೋಜ ಅವರು ಪ್ರಧಾನ ಧರ್ಮಗುರುಗಳಾಗಿ ನೆರವೇರಿಸಿದರು. ಇವರೊಂದಿಗೆ ದೇವಾಲಯದ ಧರ್ಮಗುರುಗಳಾದ ವಂ. ಫಾ. ವಿಲಿಯಂ ಮಿನೇಜಸ್ ಹಾಗೂ ಇತರ ಧರ್ಮಗುರುಗಳು ಬಲಿಪೂಜೆಯಲ್ಲಿ ಪಾಲ್ಗೊಂಡು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಚರ್ಚ್ ಪಾಲನಾ ಮಂಡಳಿಯು ಹಬ್ಬದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಹಾಗೂ ಸುಸೂತ್ರವಾಗಿ ನಿರ್ವಹಿಸಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ, ಪ್ರಾರ್ಥನೆ ಹಾಗೂ ಧಾರ್ಮಿಕ ವಿಧಿವಿಧಾನಗಳಲ್ಲಿ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದರು.
ದೇವಾಲಯದ ಧರ್ಮಗುರುಗಳಾದ ವಂ. ಫಾ. ವಿಲಿಯಂ ಮಿನೇಜಸ್ ಅವರು ಹಬ್ಬದ ಯಶಸ್ಸಿಗೆ ಸಹಕರಿಸಿದ ಎಲ್ಲಾ ಧರ್ಮಗುರುಗಳು, ಚರ್ಚ್ ಪಾಲನಾ ಮಂಡಳಿಯ ಸದಸ್ಯರು, ಭಕ್ತಾದಿಗಳು ಹಾಗೂ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿ ಎಲ್ಲರಿಗೂ ವಾರ್ಷಿಕ ಹಬ್ಬದ ಶುಭಾಶಯಗಳನ್ನು ಕೋರಿ ಧನ್ಯವಾದ ಅರ್ಪಿಸಿದರು.
ಭಕ್ತಿ, ಧಾರ್ಮಿಕ ನಂಬಿಕೆ ಹಾಗೂ ಪರಸ್ಪರ ಒಗ್ಗಟ್ಟಿನ ಪ್ರತೀಕವಾಗಿ ನಡೆದ ವಾರ್ಷಿಕ ಹಬ್ಬವು ಭಕ್ತರ ಮನದಲ್ಲಿ ಸಂತಸ ಹಾಗೂ ಆಧ್ಯಾತ್ಮಿಕ ತೃಪ್ತಿಯನ್ನು ಮೂಡಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು