ಇತ್ತೀಚಿನ ಸುದ್ದಿ
ಬೆಂಗಳೂರು | ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ರಕ್ಷಣಾ ಇಲಾಖೆ ಅಧಿಕಾರಿಗಳಿಂದವ ಬೀಳ್ಕೋಡುಗೆ
27/11/2026, 20:59
ಬೆಂಗಳೂರು (reporterkarnataka.com): ಬೆಂಗಳೂರಿನ ಬಿಜಿಎಸ್ ಜಿಐಎಂಎಸ್ ಆಸ್ಪತ್ರೆ ಉದ್ಘಾಟನೆ ಹಾಗೂ ಸಂಸ್ಥಾಪಕರ ದಿನಾಚರಣೆ ಹಾಗೂ ಇತರೆ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ರಕ್ಷಣಾ ಇಲಾಖೆಯ ಅಧಿಕಾರಿಗಳು ಆತ್ಮೀಯವಾಗಿ ಬೀಳ್ಕೊಟ್ಟರು.

ಕೇಂದ್ರ ರಕ್ಷಣಾ ಇಲಾಖೆಯ ಸಚಿವರು ವಾಯುಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ನವದೆಹಲಿಗೆ ಪ್ರಯಾಣಿಸಿದರು.












