ಇತ್ತೀಚಿನ ಸುದ್ದಿ
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ; ಪರಿಚಯಸ್ಥ ಆಟೋ ಚಾಲಕನಿಂದ ಕೃತ್ಯ
29/11/2026, 11:15
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.ಕಂ
ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಪರಿಚಯವಿದ್ದ ಆಟೋ ಚಾಲಕನಿಂದಲೇ ಈ ದುಷ್ಕೃತ್ಯ ನಡೆದಿದೆ. ಆಟೋ ಚಾಲಕ ಮಣಿಕಂಠ ಎಂಬಾತನಿಂದ ಈ ಕೃತ್ಯ ಎಸಗಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ಡ್ರಾಪ್ ನೀಡುವ ನೆಪದಲ್ಲಿ ಬಾಲಕಿಯನ್ನು ಆಟೋದಲ್ಲಿ ಕೂರಿಸಿ ಕರೆದುಕೊಂಡು ಹೋಗಿದ್ದಾನೆ.
ಆಟೋದ ಎದುರು ಸೀಟಿನಲ್ಲಿ ಕುಳ್ಳಿರಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮನೆಗೆ ಬಂದ ಬಾಲಕಿ ನೋವಿನಿಂದ ನರಳಾಡಿದ್ದಾಳೆ. ಆಕೆಯನ್ನು ಆಸ್ಪತೆಗೆ ದಾಖಲಿಸಿದ ಸಂದರ್ಭ ದೌರ್ಜನ್ಯ ಬೆಳಕಿಗೆ ಬಂದಿದೆ.
ಮಡಿಕೇರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












