ಇತ್ತೀಚಿನ ಸುದ್ದಿ
ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯದಿಂದ ಕನ್ನಡ ರಾಜ್ಯೋತ್ಸವ ಆಚರಣೆ
29/11/2026, 15:46
ಮಂಗಳೂರು(reporterkarnataka.com):ಬ್ಯಾಂಕ್ ಆಫ್ ಬರೋಡಾ, ಮಂಗಳೂರು ವಲಯದ ವತಿಯಿಂದ 2026ನೇ ಸಾಲಿನ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ವೈಭವದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಖ್ಯಾತ ಕನ್ನಡ ಲೇಖಕಿ ಡಾ. ಮೀನಾಕ್ಷಿ ರಾಮಚಂದ್ರ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕನ್ನಡ ನಟಿ ರೂಪಶ್ರೀ ವರ್ಕಾಡಿ ಅವರನ್ನು ಕನ್ನಡ ಸಾಹಿತ್ಯ ಹಾಗೂ ಕಲಾ ಕ್ಷೇತ್ರಕ್ಕೆ ಅವರು ಸಲ್ಲಿಸಿರುವ ಅಮೂಲ್ಯ ಕೊಡುಗೆಯನ್ನು ಸ್ಮರಿಸಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಬ್ಯಾಂಕ್ ಆಫ್ ಬರೋಡಾದ ಮಂಗಳೂರು ವಲಯದ ವಲಯ ಮುಖ್ಯಸ್ಥರಾದ ರಾಜೇಶ್ ಖನ್ನಾ ಅವರು ವಹಿಸಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಆಕರ್ಷಕ ಕಂಗೀಲು ನೃತ್ಯ ಹಾಗೂ ವೀರಗಾಸೆ ನೃತ್ಯ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯ ವೈಭವವನ್ನು ಸಾರಿದ ಈ ಕಾರ್ಯಕ್ರಮವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.












