9:02 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಾಳೆ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ಘೋಷಿಸಿದ ಪಾಪ್ಯುಲರ್ ಫ್ರಂಟ್

26/09/2021, 21:39

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದರೂ, ಒಕ್ಕೂಟ ಸರ್ಕಾರವು ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ ಮತ್ತು ಪ್ರತಿಭಟನೆಯನ್ನು ದಮನಿಸುವ ಪಿತೂರಿಗಳನ್ನು ನಡೆಸುತ್ತಿದೆ. ಆದರೂ ಧೃತಿಗೆಡದ ರೈತರು ಎಲ್ಲಾ ಸಂಕಷ್ಟಗಳನ್ನು ಎದುರಿಸಿಕೊಂಡು ಪ್ರತಿಭಟನೆಯನ್ನು ಮುಂದುವರಿಸಿರುವುದು ಆಶಾದಾಯಕವಾಗಿದೆ.

ಕಾರ್ಪೋರೇಟ್ ಕುಳಗಳಿಗಷ್ಟೇ ಅಪಾರ ಲಾಭ ತಂದು ಕೊಡುವ ಕರಾಳ ಕೃಷಿ ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ಒಟ್ಟು ದೇಶಕ್ಕೆ ಮಾರಕವಾಗಿದೆ. ಈ ನಿಟ್ಟಿನಲ್ಲಿ, ದೇಶದ ಜೀವಾಳವಾಗಿರುವ ಕೃಷಿಕ ವರ್ಗವು ಮಳೆ ಬಿಸಿಲನ್ನು ಲೆಕ್ಕಿಸದೇ ಮುನ್ನಡೆಸುತ್ತಿರುವ ಹೋರಾಟದೊಂದಿಗೆ ಕೈಜೋಡಿಸುವುದು ಪ್ರತಿಯೋರ್ವ ನಾಗರಿಕನ ಹೊಣೆಗಾರಿಕೆಯಾಗಿರುತ್ತದೆ. ಒಕ್ಕೂಟ ಸರಕಾರದ ಜನವಿರೋಧಿ, ಕೃಷಿಕ ವಿರೋಧಿ ನೀತಿಗಳ ವಿರುದ್ಧ ನಡೆಯುವ ರೈತರ ಎಲ್ಲಾ ರೀತಿಯ ಹೋರಾಟಗಳೊಂದಿಗೆ ಪಾಪ್ಯುಲರ್ ಫ್ರಂಟ್ ಐಕಮತ್ಯವನ್ನು ವ್ಯಕ್ತಪಡಿಸುತ್ತದೆ ಎಂದು ಯಾಸಿರ್ ಹಸನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು