8:07 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಜನಸಂಘ ಸ್ಥಾಪಕ ಪಂಡಿತ್‌ ದೀನ ದಯಾಳ್‌ ಉಪಾಧ್ಯಾಯ ಅವರ105 ನೇ ಜನ್ಮದಿನಾಚರಣೆ 

26/09/2021, 21:48

ಮಂಗಳೂರು(reporterkarnataka.com): ಏಕಾತ್ಮ ಮಾನವ ದರ್ಶನ ಮತ್ತು ಅಂತ್ಯೋದಯದ ಪರಿಕಲ್ಪನೆಯನ್ನು ತೋರಿಸಿಕೊಟ್ಟ,ಜನಸಂಘದ ಸ್ಥಾಪಕರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ105 ನೇ ಜನ್ಮದಿನಾಚರಣೆ ಕಾರ್ಯಕ್ರಮ ಇಂದು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ  ದಿ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಅದ್ಯಕ್ಷತೆ ಶಾಸಕ ಡಿ. ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು.

ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಚಾರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಅವರು ಪಂಡಿತ್ ದೀನ್ ದಯಳ್ ಉಪಾಧ್ಯಾಯ ಅವರ ಚಿಂತನೆ, ವಿಚಾರ, ಅವರು ಪ್ರತಿಪಾದಿಸಿದ ಏಕಾತ್ಮಮಾನವತಾ ಸಿದ್ಧಾಂತ ಹಾಗೂ ಅಂತ್ಯೋದಯದ ಕಲ್ಪನೆ ಇವತ್ತಿಗೂ ಪ್ರಸ್ತುತ ಎಂದು ನುಡಿ ನಮನ ಸಲ್ಲಿಸಿದರು. 

ಮೂಡ ಅಧ್ಯಕ್ಷ ರವಿಶಂಕರ್ ಮಿಜಾರ್ ಅವರು ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜೀವನದ ಬಗ್ಗೆ ಬೌದ್ಧಿಕ್  ಮಂಡಿಸಿದರು. ಮಂಡಲ ಉಪಾಧ್ಯಕ್ಷ ಅಜಯ ಕುಲಶೇಕರ್ ಅವರು ಪ್ರಧಾನ ಮಂತ್ರಿ ಮೋದಿಯವರ 71ನೇ ಹುಟ್ಟು ಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿದರು. 

ಮಂಡಲ ಪ್ರಧಾನ ಕಾರ್ಯದರ್ಶಿ ರೂಪ.ಡಿ. ಬಂಗೇರ ಸ್ವಾಗತಿಸಿದರು. ಮಂಡಲ ಕಾರ್ಯದರ್ಶಿ  ಲಲ್ಲೇಶ್ ವಂದಿಸಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯರಾದ  ಮೋನಪ್ಪ ಭಂಡಾರಿ , ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್ , ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಕಂಪನಿಯ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮೇಯರ್  ಪ್ರೇಮಾನಂದ ಶೆಟ್ಟಿ , ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರ್ ,ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ.ಜೆ ,ಮಂಡಲ ಉಪಾಧ್ಯಕ್ಷ ಕಿರಣ್ ರೈ,ರಮೇಶ್ ಹೆಗ್ಡೆ ,ರಮೇಶ್ ಕಂಡೆಟ್ಟು ,ಮೀರಾ ಕರ್ಕೇರ, ಮಂಡಲ ಕೋಶಾಧಿಕಾರಿ ಶ್ರೀನಿವಾಸ್ ಶೇಟ್ , ಮಂಡಲ ಕಾರ್ಯದರ್ಶಿಗಳಾದ ವಿನೋದ್ ಮೆಂಡನ್ ಹಾಗೂ ಸುರೇಖಾ ಹೆಗ್ಡೆ 
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು