3:04 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ತಪ್ಪು ಕಲ್ಪನೆಯಿಂದ ಭಾರತ ಬಂದ್ ಮಾಡಲಾಗಿದೆ, ಕೃಷಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ

27/09/2021, 17:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು 
ಕೇಂದ್ರ ಸರಕಾರ ರೂಪಿಸಿದೆ. ಭಾರತ ಬಂದ್ ಮಾಡಿರುವುದು ತಪ್ಪು ಕಲ್ಪನೆಯಿಂದ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಅಭಿಪ್ರಾಯಪಟ್ಟರು.
ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು ಸರ್ಕಾರ ರೂಪಿಸಿದೆ.
ದಲ್ಲಾಳಿಗಳಿಗೆ ಬಾರಿ ನಷ್ಟವಾಗುವುದರಿಂದ ತಪ್ಪು ಸಂದೇಶ ಸಾರುತ್ತಿದ್ದಾರೆ. 2008ರಿಂದ ಕರ್ನಾಟಕದಲ್ಲಿ ಈ ಕಾನೂನು ಜಾರಿ ಇದೆ. ಕೇಂದ್ರ ಸರ್ಕಾರ ಈಗಷ್ಟೇ ಕಾನೂನು ತಿದ್ದುಪಡಿ ಮಾಡಿದೆ ಎಂದು ಅವರು ನುಡಿದರು.
ಹರಿಯಾಣ, ಉತ್ತರ ಪ್ರದೇಶ, ಜಾರ್ಖಂಡ್ ರಾಜ್ಯದಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ರೈತರನ್ನು ಅವರ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಅವರಿಗೆ ಭಾರಿ ನಷ್ಟ ಸಂಭವಿಸುವುದರಿಂದ ಕೃಷಿ ಕಾನೂನು ಬಗ್ಗೆ ತಪ್ಪು ಸಂದೇಶ ಸಾರುತ್ತಿದ್ದಾರೆ ಎಂದರು.
ರೈತರಿಗೆ ಅನ್ಯಾಯವಾಗುತ್ತದೆ ಎಂದಾದರೆ ಬಹಿರಂಗ ಸವಾಲಕ್ಕೆ ಬರಲಿ. ಯಾರಾದರೂ ಸಾಬೀತುಪಡಿಸಿದರೆ ಕಾನೂನನ್ನು ಹಿಂಪಡೆಯುತ್ತೇವೆ ಎಂದು ಸವದಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು