6:02 AM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಮಂಗಳೂರು: ಭಾರತ್‌ ಬಂದ್ ಬೆಂಬಲಿಸಿ  ಬಂದರು ಶ್ರಮಿಕರ‌‌ ಸಂಘದಿಂದ ಪ್ರತಿಭಟನೆ

27/09/2021, 17:16

ಮಂಗಳೂರು(reporterkarnataka.com): ದೇಶವ್ಯಾಪಿ ಭಾರತ ಬಂದ್ ಬೆಂಬಲಿಸಿ ಮಂಗಳೂರಿನ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ಕಾರ್ಮಿಕರು ಕೆಲ‌ ಸಮಯ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.


ಪ್ರತಿಭಟನೆ ಉದ್ದೇಶಿಸಿ‌ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕ ಫೆಡರೇಶನ್ ರಾಜ್ಯ ಅಧ್ತಕ್ಷ ಹಾಗೂ‌ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಮಾತನಾಡಿ, ಕಳೆದ‌ 10 ತಿಂಗಳಿಂದ‌ ಮೂರು ಕೃಷಿ‌ ಕಾನೂನುಗಳ ವಿರುದ್ದ ರೈತರು ದೆಹಲಿ ಸುತ್ತಮುತ್ತ ಹೋರಾಟ ನಿರತರಾಗಿದ್ದಾರೆ. ‌ಆದರೆ ನರೇಂದ್ರ‌ ಮೋದಿ‌ ನೇತೃತ್ವದ ಬಿಜೆಪಿ ಸರ್ಕಾರ ರೈತರ ಜತರ ಮಾತುಕತೆ ನಡೆಸದೆ ಹೋರಾಟವನ್ನು ಹತ್ತಿಕ್ಕಲು ಹಲವು ಯತ್ನಗಳನ್ನು ನಡೆಸಿರುವುದು ಖಂಡನಾರ್ಹ. ಈ ನೂತನ ಕೃಷಿ‌ ಕಾನೂನುಗಳು ಕೃಷಿ‌ ಕ್ಷೇತ್ರದ ಕಂಪನೀಕರಣಕ್ಕೆ ಅವಕಾಶ ನೀಡಲಿವೆ ಇದರಿಂದ ಫಲವತ್ತಾದ ಕೃಷಿ‌ಭೂಮಿ ಕಾರ್ಪೊರೇಟ್ ಕೈ ವಶವಾಗಲಿದೆ. ಇದರಿಂದ ಭವಿಷ್ಯದಲ್ಲಿ ದೇಶದಲ್ಲಿ ಆಹಾರ ಸಮಸ್ಯೆ ಎದುರಿಸಲಿದೆ. ಕೋಟ್ಯಂತರ ಜನರು ಬೆಲೆ ಏರಿಕೆ ಹಾಗೂ ಹಸಿವಿನಿಂದ 

ತತ್ತರಿಸಲಿದ್ದಾರೆ. ಹೀಗಾಗಿ ದೇಶದ‌ಭವಿಷ್ಯದ ದೃಷ್ಟಿಯಿಂದ ರೈತರ ಈ‌ ಹೋರಾಟವನ್ನು ಕಾರ್ಮಿಕರು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಮತ್ತೊಂದು ಕಡೆ ದೇಶದಲ್ಲಿ ಜಾರಿಯಲ್ಲಿದ್ದ 29 ಕಾರ್ಮಿಕ‌ ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ರೂಪಿಸಿದೆ. ಇದರಿಂದ ಸ್ವಾತಂತ್ರ್ಯ ಪೂರ್ವದಿಂದಲೂ ಜಾರಿಯಲ್ಲಿದ್ದ ಹಲವು ಹಕ್ಕುಗಳು ಮತ್ತು ಸಾಮಾಜಿಕ ಸುರಕ್ಷತೆಗಳಿಂದ ಕಾರ್ಮಿಕರು ವಂಚಿತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ರೈತ ಕಾರ್ಮಿಕರ‌ ಈ‌ ಐಕ್ಯ ಚಳವಳಿ ‌ಮೂಲಕ ಈ ನೀತಿಗಳನ್ನು ಹಿಮ್ಮೆಟ್ಟಿಸಲು ಅವರು ಕರೆ ನೀಡಿದರು.

ಬಂದರು ಶ್ರಮಿಕರ‌ ಸಂಘದ ಅಧ್ಯಕ್ಷ

ವಿಲ್ಲಿ ವಿಲ್ಸನ್, ಕಾರ್ಯದರ್ಶಿ ಇಮ್ತೀಯಾಜ್, ಆದಿವಾಸಿ ಹಾಗೂ ದಲಿತ ಹಕ್ಕುಗಳ‌ ಸಮಿತಿಯ ಯೋಗಿಶ್ ಜಪ್ಪಿನ ಮೊಗರು, ಹರೀಶ ಕೆರೆಬೈಲ್, ಹಂಜಾ ತಂದೊಲಗಿ, ಸಿದ್ದಿಕ್ ಫಾರುಕ್ ಉಳ್ಳಾಲ, ಮಜೀದ್ ಉಳ್ಳಾಲ, ಮಾಧವ ಕಾವೂರು, ಮೊಯಿದಿನ್ ಕಲ್ಕಟ್ಟ,ಯಲ್ಲಪ್ಪ, ಡಿವೈಎಫ್ಐ ಮುಖಂಡರಾದ ಎ.ಬಿ ನೌಶಾದ್, ಹನೀಫ್ ಬೆಂಗ್ರೆ, ಅಸ್ಲಾಂ ಬೆಂಗ್ರೆ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು