6:41 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಖ್ಯಾತ ಹೃದಯ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿ ಶೀಘ್ರ ಕೇಂದ್ರ ಸಂಪುಟಕ್ಕೆ? : ಆರೋಗ್ಯ ಖಾತೆಯ ಜವಾಬ್ದಾರಿ?

25/05/2021, 22:48

ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ವಿಶ್ವ ಪ್ರಸಿದ್ಧ ಹೃದಯ ತಜ್ಞ, ತುಳುನಾಡಿನ ಪುತ್ರ

ಡಾ. ದೇವಿಪ್ರಸಾದ್ ಶೆಟ್ಟಿ ಅವರು ಸಂಪುಟ ಸೇರುವ ಸಾಧ್ಯತೆಗಳಿವೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಕೊರೊನಾ ಎರಡನೇ ಅಲೆಯ ಆರ್ಭಟ ಹಾಗೂ ಬರಲಿದೆ ಎನ್ನಲಾದ ಮೂರನೇ ಅಲೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯಸ್ಥರೂ ಆಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ಅವರನ್ನು ಕೇಂದ್ರ ಆರೋಗ್ಯ ಸಚಿವರನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಈಗಿರುವ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ ಅವರ ಕಾರ್ಯವೈಖರಿ ಈಗಾಗಲೇ ಸಾರ್ವಜನಿಕರ ಟೀಕೆಗೆ ಒಳಗಾಗಿದೆ. ಅಷ್ಟೇ ಅಲ್ಲದೆ ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ಡಾ. ಹರ್ಷವರ್ಧನ ನೇತೃತ್ವದ ಆರೋಗ್ಯ ಇಲಾಖೆ ವಿಫಲವಾಗಿದೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರನ್ನು ಬದಲಾಯಿಸುವ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿದ್ದಾರೆ ಎನ್ನಲಾಗಿದೆ.

ಕೊರೊನಾ ಮೂರನೇ ಅಲೆಯ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ಅವರ ಹೆಗಲಿಗೆ ಆರೋಗ್ಯ ಇಲಾಖೆಯ ಜವಾಬ್ದಾರಿಯನ್ನು ಕೊಟ್ಟು ಹರ್ಷವರ್ಧನ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ನೀಡುವ

ಕುರಿತು ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು