5:06 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ ಗೌಡ ರಾಜೀನಾಮೆ: ಕಾರಣ ಏನು?

28/09/2021, 16:09

ತುಮಕೂರು(reporterkarnataka.com)
ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ ಗೌಡ ರಾಜೀನಾಮೆ ನೀಡಿದ್ದಾರೆ.ಸುರೇಶ್ ಗೌಡ ಅವರು ತಮ್ಮರಾಜೀನಾಮೆ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ ಹೀಗಾಗಿ ಅವರೊಂದಿಗಿರಲು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ. ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭೆ ಚುನಾವಣೆ ಜತೆಗೆ, ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯೂ ಎದುರಾಯಿತು ಎಂದು ವಿವರಣೆ ನೀಡಿದ್ದಾರೆ.

ಎರಡು ಬಾರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿ, ಎರಡು ಬಾರಿ ತುಮಕೂರು ಜಿಲ್ಲಾ ಅಧ್ಯಕ್ಷನಾಗಿ, ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಯಶಸ್ವಿಯಾಗಲು ನನ್ನ ಕ್ಷೇತ್ರದ ಜನರು ತೋರಿದ ಪ್ರೀತಿ, ಸಹಕಾರ, ಬೆಂಬಲ ಕಾರಣ ಎಂದು ಅವರು ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಟ್ಟಾ ಅನುಯಾಯಿ ಆಗಿರುವ ಸುರೇಶ್ ಗೌಡ ಅವರ ರಾಜೀನಾಮೆ ಹಲವು ಪ್ರಶ್ನೆಗಳ ಉದ್ಭವಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು