12:08 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಸಿಂದಗಿ ಉಪ ಚುನಾವಣೆಯಲ್ಲಿ ನಾನು ಅಥವಾ ನನ್ನ ಪುತ್ರ ಸ್ಪರ್ಧಿಸುವುದಿಲ್ಲ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ

28/09/2021, 23:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು,ಸಿಂದಗಿ ಕ್ಷೇತ್ರದಿಂದ ತಾನು ಅಥವಾ ತನ್ನ ಪುತ್ರ ಚಿದಾನಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಸಿಂದಗಿ ಉಪ ಚುನಾವಣೆಯ ಉಸ್ತುವಾರಿಯಾಗಿ ಪಕ್ಷ ನನ್ನನ್ನು ನೇಮಿಸಿದೆ. ಉಸ್ತುವಾರಿಯಾಗಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದು ನನ್ನ ಗುರಿ. ಎರಡು ದಿನದಲ್ಲಿ ಸಿಂದಗಿ ಕ್ಷೇತ್ರಕ್ಕೆ ತೆರಳಿ ಸ್ಥಳೀಯರ ಅಭಿಪ್ರಾಯ ಸಂಗ್ರಹಣೆ ಮಾಡಲಾಗುವುದು ಎಂದರು.

ಚುನಾವಣೆ ಪ್ರಚಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬರುತ್ತಾರೆ. ಸಿಂದಗಿ, ಹಾನಗಲ್ ಎರಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಎಂದು ಲಕ್ಷ್ಮಣ್ ಸವದಿ ಭವಿಷ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು