ಇತ್ತೀಚಿನ ಸುದ್ದಿ
ಬೆಳ್ತಂಗಡಿ: ಎಂಕಾಂ ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್ ನೋಟ್ ಆಕೆ ಬರೆದದ್ದು ಏನು…?
29/09/2021, 00:16

ಬೆಳ್ತಂಗಡಿ(reporterkarnataka.com) : ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆ ಎಂಬಲ್ಲಿ ನ ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹುಣ್ಸೆಕಟ್ಟೆಯ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿಗಳ ಪುತ್ರಿ ದೀಕ್ಷಾ(22) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಡೆತ್ ನೋಟ್ ನ ವಿವರ ಇನ್ನೂ ಸಿಕ್ಕಿಲ್ಲ
ಯುವತಿ ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಕಾಂ ವ್ಯಾಸಂಗ ಮಾಡುತ್ತಿದ್ದಳು. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ