2:16 PM Friday24 - October 2025
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್

ಇತ್ತೀಚಿನ ಸುದ್ದಿ

ರೆಮೆಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ; ಬೆಳಗಾವಿ ಜಿಲ್ಲಾಧಿಕಾರಿ ಎಚ್ಚರಿಕೆ 

26/05/2021, 07:06

ಅಥಣಿ(reporterkarnataka news): ರೆಮೆಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಜಿಲ್ಲಾಧಿಕಾರಿಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ಅಥಣಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗ ಸಾಕಷ್ಟು ರೆಮೆಡಿಸಿವರ್ ಚುಚ್ಚುಮದ್ದು ಲಭ್ಯವಿದೆ. ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಯಾವುದೇ ಸಾಕ್ಷ್ಮಾಧಾರ ದೊರಕಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಕೊರೊನಾ ರೋಗಿಗಳ ಸಂಬಂಧಿಕರಿಗೆ ಊಟ ಕೊಡುವ ನೆಪದಲ್ಲಿ ಆಸ್ಪತ್ರೆಯೊಳಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ. ಅವರು ಊಟ ಕೊಡಲು ಆಸ್ಪತ್ರೆಯೊಳಗೆ ಹೋದರೆ ಸೋಂಕು ಅವರ ಜತೆ ಮನೆ ಮಂದಿಗೆ ಹರಡುವ ಸಾಧ್ಯತೆಯಿದೆ. ಊಟವನ್ನು ಆಸ್ಪತ್ರೆಯ ಹೊರಭಾಗದಲ್ಲಿರುವ ಆಸ್ಪತ್ರೆ ಸಿಬ್ಬಂದಿಗಳಿಗೆ ಒಪ್ಪಿಸಬೇಕು. ಅವರು ರೋಗಿಗಳಿಗೆ ತಲುಪಿಸುವ ಕಾರ್ಯ ಮಾಡುತ್ತಾರೆ ಎಂದು ಜಿಲ್ಲಾಧಿಕಾರಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು