4:48 PM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಆತ್ಮ ನಿರ್ಭರ ಯೋಜನೆಯಡಿ ಕೃಷಿಕ ಪ್ರಶಸ್ತಿ: ತಾಲೂಕು, ಜಿಲ್ಲಾಮಟ್ಟದ ಸಾಧಕರು ಕೂಡ ಆರ್ಹರು; ವಿವರ ಕಳುಹಿಸಿ

30/09/2021, 08:27

ಮಂಗಳೂರು (reporterkarnataka.com.):- 2021-22ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ಒಬ್ಬ ಅರ್ಜಿದಾರರು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿ ಮಾತ್ರ ಸಲ್ಲಿಸಬೇಕು. 

ಚಟುವಟಿಕೆಗಳ ವಿವರ ಇಂತಿದೆ:

ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ.

ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಯ ಜೆರಾಕ್ಸ್ ಪ್ರತಿ, ಫೋಟೋಗ್ರಾಫರ್, ಸಿ.ಡಿ, ಖರ್ಚು ವೆಚ್ಚ, ಪತ್ರಿಕಾ ಪ್ರಕಟಣೆಗಳ ಮಾಹಿತಿಗಳ ದಾಖಲೆಗಳನ್ನು ಲಗತ್ತಿಸಬೇಕು.
ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮಂಗಳೂರು ತಾಲೂಕಿನ ಉಪ ಕೃಷಿ ನಿರ್ದೇಶಕರ ಕಚೇರಿ ಹಾಗೂ ಮಂಗಳೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು