1:10 PM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಗುಂಡ್ಮಿ: ಭಗವತಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ವಿಚಾರಗೋಷ್ಠಿ

30/09/2021, 08:42

ಕುಂದಾಪುರಕ್ಕೆ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ ) ಬ್ರಹ್ಮಾವರ ಹಾಗೂ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಗುಂಡ್ಮಿ  ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಭಗವತಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕ ರಾಮಚಂದ್ರ ಐತಾಳ್ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ನಾಗರತ್ನ ಹೇರಳೆ ಅವರು ಕುಟುಂಬ ನಿರ್ವಹಣೆಯಲ್ಲಿ ಮಹಿಳೆ ಮತ್ತು ಪುರುಷರ ಪಾತ್ರ ಏನು, ಮಕ್ಕಳಿಗೆ ಸಂಸ್ಕಾರವನ್ನು ನೀಡುವಲ್ಲಿ ತಾಯಿಯ ಪಾತ್ರ ಏನು? ಮಕ್ಕಳನ್ನು ಹೆಣ್ಣು ಮತ್ತು ಗಂಡು ಎಂಬ ಭೇದಭಾವವಿಲ್ಲದೆ ಬೆಳೆಸಬೇಕು ಎಂದು ಹೇಳಿದರು. 

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬ್ರಹ್ಮಾವರ ತಾಲೂಕು ಯೋಜನಾಧಿಕಾರಿ ದಿನೇಶ್ ಶೇರಿಗಾರ್ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತಾ ಸದಸ್ಯರು ವ್ಯವಹಾರದಲ್ಲಿ ಶಿಸ್ತನ್ನು ಯಾವ ರೀತಿ ಬೆಳೆಸಿಕೊಳ್ಳಬೇಕು ಎಂಬುದರ ಬಗ್ಗೆ ಅರಿವು ನೀಡಿದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ ಅವರು ಮಹಿಳೆಯರು ಸಂಸ್ಕಾರಯುತವಾಗಿ ಯಾವ ರೀತಿ ಕುಟುಂಬವನ್ನು ನಡೆಸಿ ಕೊಂಡು ಹೋಗ ಬೇಕು ಎನ್ನುವುದರ ಬಗ್ಗೆ ತಿಳಿಸಿದರು. 

ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಕನಕ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷರಾದ ರಾಧಾ ಹಾಗೂ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. 

ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ
ನೇತ್ರಾವತಿ ನಿರೂಪಿಸಿ, ವಲಯದ ಮೇಲ್ವಿಚಾರಕರ ನಾಗೇಂದ್ರ ಸ್ವಾಗತಿಸಿದರು. ಶಶಿಕಲಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು