4:25 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಬಾಹ್ಯಾಕಾಶದಲ್ಲಿ ಇಂದು ಘಟಿಸಲಿದೆ ಅಪರೂಪದ  ಘಟನೆ: ಚಂದ್ರ ಗ್ರಹಣ ಜತೆಗೆ ಸೂಪರ್ ಮೂನ್

26/05/2021, 07:17

ನವದೆಹಲಿ(reporterkarnataka news):  ಬಾಹ್ಯಾಕಾಶದಲ್ಲಿ ಇಂದು (ಮೇ 26) ಅಪರೂಪದ ಘಟನೆ ನಡೆಯಲಿದೆ. ಪ್ರಸಕ್ತ ವರ್ಷದ ಮೊದಲ ಚಂದ್ರಗ್ರಹಣ ಮತ್ತು  ‘ಸೂಪರ್‌ಮೂನ್‌’  ಗೋಚರವಾಗಲಿದೆ. ಚಂದ್ರ ಗ್ರಹಣ ಮತ್ತು ಕೆಂಪು ಚಂದ್ರನನ್ನು ಅಂದು ಏಕಕಾಲಕ್ಕೆ ವೀಕ್ಷಿಸಬಹುದಾಗಿದೆ. 

ಚಂದ್ರ ಅಂದು ಭೂಮಿಯಿಂದ ಅತೀ ಸಮೀಪದಲ್ಲಿ ಗೋಚರಿಸಲಿದ್ದಾನೆ. ಇದರಿಂದ ಚಂದ್ರ ಸಾಮಾನ್ಯಕ್ಕಿಂತಲೂ ಹೆಚ್ಚು ದೊಡ್ಡದಾಗಿ ಕಾಣಿಸುತ್ತಾನೆ. ಚಂದ್ರನನ್ನು ಭೂಮಿಯ ನೆರಳು ಸಂಪೂರ್ಣವಾಗಿ ಆವರಿಸಿಕೊಳ್ಳುವುದರಿಂದ ಅಂದು ಗ್ರಹಣ ಕೂಡ ಸಂಭವಿಸಲಿದೆ. ಆದರೆ ಚಂದ್ರ ಸಂಪೂರ್ಣ ಕಪ್ಪಗಾಗುವುದಿಲ್ಲ. ಬದಲಾಗಿ, ಕೆಂಪು ಬಣ್ಣ ಕಾಣಿಸಿಕೊಳ್ಳುತ್ತದೆ. ಆದ್ದರಿಂದ, ಸಂಪೂರ್ಣ ಚಂದ್ರ ಗ್ರಹಣವನ್ನು ಕೆಂಪು ಅಥವಾ ರಕ್ತ ಚಂದ್ರ ಎಂದು ಕರೆಯಲಾಗುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಆಸ್ಟ್ರೇಲಿಯಾ, ಜಪಾನ್‌, ಅಮೆರಿಕ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ‘ಸೂಪರ್‌ಮೂನ್‌’ ದರ್ಶನವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು