6:46 PM Sunday1 - February 2026
ಬ್ರೇಕಿಂಗ್ ನ್ಯೂಸ್
ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಇತ್ತೀಚಿನ ಸುದ್ದಿ

ಯಾಸ್’ ಚಂಡಮಾರುತದ ಭೀತಿ:  ಕೋಲ್ಕತ್ತಾ ಏರ್ ಪೋರ್ಟ್ ಬಂದ್ ; ರೈಲುಗಳ ಸಂಚಾರ ರದ್ದು, ಇನ್ನೂ 3 ದಿನ ಮಳೆ

26/05/2021, 07:27

ನವದೆಹಲಿ(reporterkarnataka news) : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ‘ಯಾಸ್’ ಚಂಡಮಾರುತವಾಗಿ ಪರಿವರ್ತನೆಗೊಂಡು ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಮೇ 24 ರಿಂದ ಮೇ 29ರ ನಡುವೆ 25 ರೈಲುಗಳನ್ನು ರದ್ದು ಗೊಳಿಸಲಾಗಿದೆ. ಇದರೊಂದಿಗೆ ಕೋಲ್ಕತ್ತಾದ ಸುಭಾಶ್ ಚಂದ್ರ ಬೋಸ್ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ಬೆಳಿಗ್ಗೆ ರೂಪುಗೊಂಡ ಕಡಿಮೆ ಒತ್ತಡದ ಪ್ರದೇಶವು ವಾಯುಭಾರ ಕುಸಿತಕ್ಕೆ ತೀವ್ರಗೊಂಡಿದೆ.

ಸೋಮವಾರ ಅದು ಯಾಸ್  ಚಂಡಮಾರುತವಾಗಿ ರೂಪುಗೊಂಡಿದೆ. ಚಂಡಮಾರುತ ಮೇ 26ರ ಸಂಜೆ ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ ಕರಾವಳಿಗಳನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಡಾ. ಮೊಹಾಪಾತ್ರ ಮಾಹಿತಿ ನೀಡಿದ್ದಾರೆ.

ಚಂಡಮಾರುತದ ಗಾಳಿಯ ವೇಗವು ಗಂಟೆಗೆ ಸುಮಾರು 155-165 ಕಿ.ಮೀ. ಎಂದು ಐಎಂಡಿ ಊಹಿಸಿತ್ತು, ಇದು ಗಂಟೆಗೆ 185 ಕಿ.ಮೀ. ವೇಗದಲ್ಲಿ ಬೀಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು