ಇತ್ತೀಚಿನ ಸುದ್ದಿ
ರಾಜ್ಯದ ಎಲ್ಲ ಶಾಲೆಗಳಲ್ಲಿ ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ಆರಂಭ
02/10/2021, 12:25
ಬೆಂಗಳೂರು(reporterkarnataka.com): ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಣೆ ಮಾಡುವ ಮೂಲಕ ರಾಜ್ಯದ ಶಾಲೆಗಳಲ್ಲಿ ಸ್ಥಗಿತಗೊಂಡಿದ್ದ
ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಧ್ಯುಕ್ತವಾಗಿ ಆರಂಭಿಸೋದಕ್ಕೆ ರಾಜ್ಯ ಸರಕಾರ ಆದೇಶಿಸಿದೆ.
ದಿನಪೂರ್ತಿ ತರಗತಿಯ ನಡೆಸುವಂತೆ ಸುತ್ತೋಲೆ ಹೊರಡಿಸಿದ ಬಳಿಕ ಈಗ ಮತ್ತೆ ನ.1ರಿಂದ ಬಿಸಿಯೂಟ, ಬಿಸಿ ಹಾಲು ಪ್ರಾಂಭಿಸುವ ಮೂಲಕ ಪೂರ್ಣ ಪ್ರಮಾಣದ ಶಾಲೆಯು ಪ್ರಾರಂಭಿಸಿದಂತಾಗುತ್ತದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆ ಜಂಟಿ ನಿರ್ದೇಶಕರಾದಂತ ಟಿ.ನಾರಾಯಣಗೌಡ ರಾಜ್ಯದ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಯಡಿ 1ರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಬಿಸಿಯೂಟವನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗಿದ್ದು, ಕೆಲವೊಂದು ಕ್ರಮಗಳನ್ನು ಅನುಸರಿಸುವ ಬಗ್ಗೆ ಕರಡು ಪ್ರಸ್ತಾವನೆಯನ್ನು ನಿಮ್ಮ ಅಭಿಪ್ರಾಯ ಅಥವಾ ಸಲಹೆಗಳೇನಾದರೂ ಇದ್ದಲ್ಲಿ ಕೂಡಲೇ ಅ.10 ರೊಳಗೆ ಸಲ್ಲಿಸಲು ತಿಳಿಸಿದ್ದಾರೆ.