6:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉರ್ವ ಠಾಣೆ ಹೆಡ್ ಕಾನ್ ಸ್ಟೇಬಲ್ ಸಿದ್ಧಾರ್ಥ್ ಹೃದಯಾಘಾತಕ್ಕೆ ಬಲಿ

02/10/2021, 22:21

ಮಂಗಳೂರು(reporterkarnataka.com): ನಗರದ ಉರ್ವ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಾರ್ಥ್ ಜೆ. (41) ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಈಶ್ವರಮಂಗಲದವರಾದ ಸಿದ್ದಾರ್ಥ್ ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂತು. ಸಹೋದ್ಯೋಗಿಗಳು ಅವರನ್ನು ಮನೆಗೆ ಹೋಗಲು ತಿಳಿಸಿದರು. ನಂತರ ಸಿದ್ದಾರ್ಥ್ ಅವರು ಮನೆಗೆ ತೆರಳಿದರು. ಆದರೆ ಶನಿವಾರ ಮುಂಜಾನೆ 3 ಗಂಟೆಯ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು