4:18 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಬಂಟ್ವಾಳ: ವಿವಿಧ ಯೋಜನೆಗಳ ಅಂತ್ಯೋದಯ ಕಾರ್ಯಾಗಾರಕ್ಕೆ ಕೇಂದ್ರ ಸಚಿವ ನಾರಾಯಣಸ್ವಾಮಿ ಚಾಲನೆ

04/10/2021, 13:23

ಬಂಟ್ವಾಳ(reporterkarnataka.com):
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ, “ಅಂತ್ಯೋದಯ” ಇಲಾಖೆಗಳ ವಿವಿಧ ಯೋಜನೆಗಳ ಕುರಿತು ಬಂಟವಾಳದ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ಉದ್ಘಾಟಿಸಿದರು.


ಶಾಸಕರಾದ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್,ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ,ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಸಂಜೀವ ಮಠಂದೂರು, ಶಾಸಕ ಯು.ಟಿ ಖಾದರ್,ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ವಿವಿಧ ಅಭಿವೃದ್ದಿ ನಿಗಮಗಳ ಅಧ್ಯಕ್ಷರುಗಳಾದ ಸಂತೋಷ್ ರೈ ಬೋಳಿಯಾರ್, ನಿತೀನ್ ಕುಮಾರ್, ಪ್ರೋ. ಲಿಂಗಣ್ಣ, ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಎನ್. ನಾಗಾಂಬಿಕ ದೇವಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ. ಯೋಗೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್, ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಡಾ. ಹೇಮಲತಾ, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ, ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು