10:56 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಫೀಸಿಗಾಗಿ ಬಾಯಿಬಿಟ್ಟ ಖಾಸಗಿ ಕಾಲೇಜು : ಕಿರುಕುಳ ತಾಳಲಾರದೆ ಕೊಲಾಸೋ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

06/10/2021, 17:53

ಮಂಗಳೂರು(reporterkarnatka.com): ಕಾಲೇಜು ಶುಲ್ಕ ಪಾವತಿಸುವಂತೆ ಆಡಳಿತ ಮಂಡಳಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಬಿಎಸ್ಸಿ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. 

ನಗರದ ಕದ್ರಿಯಲ್ಲಿರುವ ಕೊಲಾಸೋ ನರ್ಸಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ನೀನಾ ಸತೀಶ್‌ ( 19) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕದ್ರಿಯಲ್ಲಿರುವ ಕಾಲೇಜಿನ ಹಾಸ್ಟೇಲ್‌ನ ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಮೂಲದ ನೀನಾ ಅವರು ನಗರದ ಕೊಲಾಸೋ ನರ್ಸಿಂಗ್‌ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು. ನರ್ಸಿಂಗ್‌ ವಿದ್ಯಾಭ್ಯಾಸಕ್ಕಾಗಿ ಕಾಲೇಜಿಗೆ 75 ಸಾವಿರ ರೂಪಾಯಿ ಫೀಸ್‌ 

ಪಾವತಿಸಿದ್ದರು. ಉಳಿದ ಹಣವನ್ನು ಪಾವತಿ ಮಾಡುವಂತೆ ಕಾಲೇಜಿನ ಆಡಳಿತ ಮಂಡಳಿ ಕೇಳುತ್ತಿದೆ. ಹಣ ಪಾವತಿ ಮಾಡದಿದ್ದರೆ ಯೂನಿಫಾರ್ಮ ನೀಡುವುದಿಲ್ಲ ಎಂದು ಬೆದರಿಕೆಯೊಡ್ಡಿದೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನೀನಾ ಅವರು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಕೊಲಾಸೋ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ಗೆ 1.25 ಲಕ್ಷ ರೂಪಾಯಿ ಶುಲ್ಕ ಪಾವತಿ ಮಾಡಬೇಕಾಗಿತ್ತು. ನೀನಾ 75 ಸಾವಿರ ಪಾವತಿ ಮಾಡಿದ್ದರು. ತಾಯಿ ಕೂಲಿ ಕೆಲಸ ಮಾಡಿ ಮಗಳಿಗೆ

ವಿದ್ಯಾಭ್ಯಾಸ ಮಾಡಿಸುತ್ತಿರುವುದರಿಂದ ನೀನಾಗೆ ಉಳಿದ 50 ಸಾವಿರ ರೂ. ಶುಲ್ಕ ಸಕಾಲದಲ್ಲಿ ಪಾತಿಸಲು ಸಾಧ್ಯವಾಗಲಿಲ್ಲ. ಕೊರೊನಾದ ಕಷ್ಟ ಕಾಲದಲ್ಲಿಯೂ ಕಾಲೇಜು ಆಡಳಿತ ಮಂಡಳಿ ಶುಲ್ಕ ಭರಿಸುವಂತೆ ವಿದ್ಯಾರ್ಥಿನಿಗೆ ಒತ್ತಡ ಹೇರಿದೆ.

ಫೀಸು ತುಂಬುವಂತೆ ಯಾವುದೇ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳಿಗೆ, ಪೋಷಕರಿಗೆ ಒತ್ತಡ ಹೇರಬಾರದು ಎಂದು ಜಿಲ್ಲಾಧಿಕಾರಿ ಈಗಾಗಲೇ ಆದೇಶ ಕೂಡ ಹೊರಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು