5:20 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಕಾರ್ಕಳ: ಜಲಜೀವನ್ ಮಿಷನ್ ನಡಿ ಕುಡಿಯುವ ನೀರು;  53.32 ಕೋಟಿ ರೂ.ಗಳ ಯೋಜನೆ ತಯಾರಿ

06/10/2021, 17:56

ಕಾರ್ಕಳ(reporterkarnataka.com):
ಕಾರ್ಕಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಎಲ್ಲ ಗ್ರಾಮೀಣ ಭಾಗದ ಜನವಸತಿ ಪ್ರದೇಶದ ಕುಟುಂಬಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಕಾರ್ಯಾತ್ಮಕ ನಳ್ಳಿ ನೀರಿನ ಸಂಪರ್ಕ ಒದಗಿಸಿ ಪ್ರತಿ ಸದಸ್ಯನಿಗೆ ದಿನಕ್ಕೆ 55 ಲೀಟರ್ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು ಹೊಂದಲಾಗಿದ್ದು, ಒಟ್ಟು 53.32 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದೆ.

ಕಾರ್ಕಳ ತಾಲೂಕಿನಲ್ಲಿ 150 ಕಾಮಗಾರಿಗಳನ್ನು ಮತ್ತು ಹೆಬ್ರಿ ತಾಲೂಕಿನಲ್ಲಿ 48 ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಯೋಜನೆಯಡಿ ಒಟ್ಟು 34 ಗ್ರಾಮ ಪಂಚಾಯತ್‌ಗಳ 504 ಜನವಸತಿ ಪ್ರದೇಶಗಳಿಗೆ ನೀರಿನ ಸಂಪರ್ಕ ಒದಗಿಸಲು ಕಾರ್ಕಳ ತಾಲೂಕಿನಲ್ಲಿ 150 ಕಾಮಗಾರಿಗಳನ್ನು ಮತ್ತು ಹೆಬ್ರಿ ತಾಲೂಕಿನಲ್ಲಿ 48 ಕಾಮಗಾರಿಗಳನ್ನು ಕೈಗೊಳ್ಳಲು ಅಂದಾಜು ಮೊತ್ತ ರೂ. 53.32 ಕೋಟಿಗಳಿಗೆ ಯೋಜನೆ ರೂಪಿಸಲಾಗಿದೆ. ಕಾಮಗಾರಿಗಳಲ್ಲಿ ಒಟ್ಟು 133 ಕೊಳವಿ ಬಾವಿಗಳು 92 ಮೇಲ್ಮಟ್ಟದ ಟ್ಯಾಂಕ್ ಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. 

198 ಕಾಮಗಾರಿಗಳ ಪೈಕಿ 14 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, 137 ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುತ್ತವೆ ಹಾಗೂ 64 ಮೇಲ್ಮಟ್ಟದ ಟ್ಯಾಂಕ್ ಗಳು ಪ್ರಗತಿಯಲ್ಲಿರುತ್ತದೆ. ಬಾಕಿ ಉಳಿದ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯ ಹಂತದಲ್ಲಿರುತ್ತದೆ. 

ಇತ್ತೀಚಿನ ದಿನಗಳಲ್ಲಿ ಕೊಳವೆ ಬಾವಿಗಳಲ್ಲಿನ ನೀರಿನ ಲಭ್ಯತೆಯು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ವಾರಾಹಿ ನದಿಯ ಶಾಶ್ವತ ಜಲ ಮೂಲದಿಂದ ನೀರನ್ನು ಪಡೆದು ಕಾರ್ಕಳ ಕ್ಷೇತ್ರದ ಉಭಯ ತಾಲೂಕಿನ ಎಲ್ಲ ಜನವಸತಿಗಳಲ್ಲಿರುವ ಪ್ರತಿಯೊಬ್ಬರಿಗೂ ದಿನಕ್ಕೆ ತಲಾ 55 ಲೀಟರ್ ಶುದ್ಧ ಕುಡಿಯುವ ನೀರನ್ನು ಮುಂದಿನ 30 ವರ್ಷಗಳವರೆಗೆ ಸರಬರಾಜು ಮಾಡಲು ಅಂದಾಜು ರೂ.600.00 ಕೋಟಿಗೂ ಅಧಿಕ ಮೊತ್ತದ  ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ರೂಪಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು