10:14 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ಶೂಟ್ ಔಟ್: ಅಪ್ಪ ಹಾರಿಸಿದ ಗುಂಡು ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಪುತ್ರ ಸಾವು

06/10/2021, 19:04

ಮಂಗಳೂರು(reporterkarnataka.com) : ನಗರದ ಮೋರ್ಗನ್ ಗೇಟ್ ನ ವೈಷ್ಣವಿ ಎಕ್ಸ್ ಪ್ರೆ ಸ್ ಕಾರ್ಗೋ ಪ್ರೈ.ಲಿ. ಸಂಸ್ಥೆಯ ಮಾಲೀಕ ರಾಜೇಶ್ ಪ್ರಭು ತನ್ನ ಕೆಲಸದವರಿಗೆ ಹಾರಿಸಿದ ಗುಂಡು ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಅವರ ಪುತ್ರ ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮಂಗಳವಾರ ಸಂಬಳ ಕೇಳಲು ಬಂದಿದ್ದ ನೌಕರರ ಮೇಲೆ ಸಿಟ್ಟಿಗೆದ್ದ ರಾಜೇಶ್ ಪ್ರಭು ತನ್ನ ಬಳಿ ಇದ್ದ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದರು. ಅದು ತಪ್ಪಿ ಅವರ 16ರ ಹರೆಯದ ಪುತ್ರ ಸುಧೀಂದ್ರನ ತಲೆಗೆ ಬಿದ್ದಿತ್ತು. ಕಣ್ಣಿನೊಳಗಿನಿಂದ ಪ್ರವೇಶಿಸಿದ ಗುಂಡು ಮೆದುಳು ಹೊಕ್ಕಿತ್ತು. ಬಾಲಕನನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿಸಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಇಂದು ಮೃತಪಟ್ಟಿದ್ದಾನೆ. ಆರೋಪಿ ತಂದೆ ರಾಜೇಶ್ ಪ್ರಭು ಅವರನ್ನು ಬಂಧಿಸಲಾಗಿದೆ.

ನಗರದ ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದರು. ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸ್ಥಳಕ್ಕೆ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು