10:02 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಲಕ್ನೋ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಣಿ: ಪೊಲೀಸ್ ವಾಹನದಲ್ಲಿ ತೆರಳಲು ನೀಡಿದ ಆದೇಶ ವಿರುದ್ಧ ಪ್ರತಿಭಟನೆ

06/10/2021, 22:02

ಲಕ್ನೋ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಕ್ನೋದ ಚೌಧುರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಧರಣಿ ಆರಂಭಿಸಿದ್ದಾರೆ. ಭದ್ರತಾ ಪಡೆ ಅವರನ್ನು ಸ್ವಂತ ವಾಹನದಲ್ಲಿ ಪ್ರಯಾಣಿಸಲು ಅವಕಾಶ ನೀಡದನ್ನು ಪ್ರತಿಭಟಿಸಿ ಧರಣಿ ನಡೆಸುತ್ತಿದ್ದಾರೆ.

ಹಿಂಸಾಚಾರ ನಡೆದ ಲಖೀಮ್ ಪುರಕ್ಕೆ ತೆರಳಲು ಲಕ್ನೊಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಪೊಲೀಸ್ ವಾಹನದಲ್ಲಿ ತೆರಳುವಂತೆ ಆಡಳಿತ ಸೂಚನೆ ನೀಡಿದೆ. ಆದರೆ ರಾಹುಲ್ ಅದನ್ನು ನಿರಾಕರಿಸಿದ್ದಾರೆ. ಭದ್ರತಾ ಪಡೆಯ ಸಿಬ್ಬಂದಿಗಳು ಮಾನವಕೋಟೆ ನಿರ್ಮಿಸಿ ರಾಹುಲ್ ತೆರಳದಂತೆ ತಡೆದಿದ್ದಾರೆ. ಇನ್ನೊಂದು ಕಡೆ ವಿಮಾನ ನಿಲ್ದಾಣದ ಹೊರಭಾಗದಲ್ಲಿ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.


ಲಖೀಮ್ ಪುರಕ್ಕೆ ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಸರಕಾರ ಈಗಾಗಲೇ ಬಂಧಿಸಿ ಸೀತಾಪುರ ಅತಿಥಿಗೃಹದಲ್ಲಿ ಬಂಧನದಲ್ಲಿಡಲಾಗಿದೆ. ಅತಿಥಿ ಗೃಹದ ಸುತ್ತಲು ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗಿದೆ. ಪ್ರಿಯಾಂಕಾ ಗಾಂಧಿ ಅವರು 48 ರಾಶಿಗಳಿಂದ ಬಂಧನದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು