1:31 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

3 ದಿನಗಳ ರಾಜ್ಯ ಪ್ರವಾಸ ಪೂರ್ಣ: ಕಡಲನಗರಿಯಿಂದ ದಿಲ್ಲಿಗೆ ತೆರಳಿದ ರಾಷ್ಟ್ರಪತಿ; ದೇಶದ ಪ್ರಥಮ ಪ್ರಜೆಗೆ ಪುಸ್ತಕ ಕಾಣಿಕೆ

08/10/2021, 19:28

ಮಂಗಳೂರು(reporterkarnataka.com): ಮೂರು ದಿನಗಳ ಕಾಲ ರಾಜ್ಯದ ಪ್ರವಾಸ ಕೈಗೊಂಡಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಮ್ಮ ಪತ್ನಿ ಹಾಗೂ ಪುತ್ರಿಯೊಂದಿಗೆ ಅ.8ರ ಶುಕ್ರವಾರ ಸಂಜೆ ಪ್ರವಾಸವನ್ನು ಮುಗಿಸಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊಸದಿಲ್ಲಿಗೆ ತೆರಳಿದರು.


ಈ ಸಂದರ್ಭದಲ್ಲಿ ಅವರಿಗೆ ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಡಿಜಿಪಿ ಜಿತೇಂದ್ರ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ರಾಷ್ಟ್ರಪತಿ ಭವನದ ಅಧಿಕಾರಿಗಳು ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಚಿವರು ರಾಷ್ಟ್ರಪತಿಯವರಿಗೆ ಪುಸ್ತಕವೊಂದನ್ನು ಕಾಣಿಕೆಯಾಗಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು