10:21 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಪ್ರಚೋದನಕಾರಿ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲು

08/10/2021, 22:19

ಮಂಗಳೂರು(reporterkarnataka.com):

ಸುರತ್ಕಲ್‌ನಲ್ಲಿ ಬಜರಂಗದಳ ಹಾಗೂ ದುರ್ಗಾವಾಹಿನಿಯಿಂದ ಆಯೋಜಿಸಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ
ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದು, ಅವರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಲಾಗಿದೆ.

ಅಬ್ದುಲ್ ಖಾದರ್ ಎಂಬವರು ಮುಸ್ಲಿಂ ಸಮುದಾಯವನ್ನು ಅವಹೇಳನಗೈದು ನೀಡಿರುವ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ದೂರನ್ನು ಪರಿಗಣಿಸಿ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 505/2 ಅಡಿ ಕೇಸು ದಾಖಲಿಸಿದ್ದಾರೆ. ಇವರೆಡು ಸೆಕ್ಷನ್ ಗಳೂ ಸ್ಟೇಶನ್ ಜಾಮೀನು ರಹಿತ ಆಗಿದ್ದು ಪೊಲೀಸರು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಬೇಕಾಗುತ್ತದೆ.

ಬ್ಯಾರಿಗಳು ಮೀನು ಮಾರುವವರು, ನಮ್ಮ ಅನ್ನ ತಿಂದು ಜೀವಿಸಲು ಎಷ್ಟು ಅಹಂಕಾರ. ಬಜರಂಗದಳ ಕಾರ್ಯಕರ್ತರು ಮನಸ್ಸು ಮಾಡಿದರೆ ಎರಡು ದಿನದಲ್ಲಿ ಎಲ್ಲ ಮುಸ್ಲಿಮ್ ಹೆಣ್ಣು ಮಕ್ಕಳನ್ನು ಹಿಂದು ಧರ್ಮಕ್ಕೆ ಮತಾಂತರ ಮಾಡುತ್ತಾರೆ.
ಮುಸ್ಲಿಂ ಹೆಣ್ಣು ಮಕ್ಕಳಿಗೆ ಕುಂಕುಮ ಇಟ್ಟು ಮತಾಂತರಿಸುತ್ತೇವೆ ಎಂದು ಚೈತ್ರಾ ಕುಂದಾಪುರ ಭಾಷಣದಲ್ಲಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ. ಇದು ಒಂದು ಧರ್ಮವನ್ನು ಅವಹೇಳನ ಮಾಡಿದಂತೆ ಎಂಬುದಾಗಿ ಪರಿಗಣಿಸಿ, ಪೊಲೀಸರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು