ಇತ್ತೀಚಿನ ಸುದ್ದಿ
ಸರಕಾರ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕ: ರಾಜ್ಯ ಸರಕಾರ ಆದೇಶ; ಒಟ್ಟು 3253 ಅತಿಥಿ ಶಿಕ್ಷಕರ ನೇಮಕ
09/10/2021, 11:11
ಬೆಂಗಳೂರು(reporterkarnataka.com): ಶಿಕ್ಷಕ ಹುದ್ದೆಯ ಅಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ಮಂಜೂರಾಗಿ ಖಾಲಿ ಇರುವ ವಿಷಯ ಬೋಧನೆ ಮಾಡುವ ಶಿಕ್ಷಕರ ಹುದ್ದೆಗಳ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆದುರಾಗಿ ಒಟ್ಟು 3253 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದಿದ್ದಾರೆ