8:06 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ: ಕಾರ್ಕಳದಲ್ಲಿ ವಿಎಚ್ ಪಿ, ಭಜರಂಗ ದಳ ಪ್ರತಿಭಟನೆ

09/10/2021, 18:14

ಕಾರ್ಕಳ(reporterkarnataka.com) : ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ ಕಾರ್ಕಳ ಬಸ್‌ ನಿಲ್ದಾಣದ ಬಳಿ ಶನಿವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಕಳ ಪ್ರಖಂಡದ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಭಜರಂಗದಳ ಪ್ರಾಂತೀಯ ಸಂಚಾಲಕ ಸುನಿಲ್‌ ಕೆ.ಆರ್.‌, 1990ರ ನಂತರ ಕಾಶ್ಮೀರದಲ್ಲಿ ಹಿಂದೂಗಳ ಸರಣಿ ಹತ್ಯೆ ನಡೆಯುತ್ತಿದೆ. ಒಂದೆರಡು ವಾರದಲ್ಲಿ 8 ಹಿಂದೂ ಕಾಶ್ಮೀರ ಪಂಡಿತರ ಹತ್ಯೆಯಾಗಿದೆ. ಅಲ್ಲಿನ ಪಂಡಿತರು, ಹಿಂದೂಗಳಿಗೆ ಧೈರ್ಯ, ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಹಿಂದೂ ಸಮಾಜ ಒಗ್ಗೂಡಬೇಕೆಂದರು.

ವಿಹಿಂಪ ಜಿಲ್ಲಾ ಉಪಾಧ್ಯಕ್ಷ ಅಶೋಕ್‌, ಕಾರ್ಯದರ್ಶಿ ಸುಧೀರ್‌ ನಿಟ್ಟೆ, ಭಜರಂಗದಳದ ಅವಿನಾಶ್‌, ಪ್ರಸಾದ್‌, ಶರತ್‌ ಉಪಸ್ಥಿತರಿದ್ದರು.

ಶೈಲೇಶ್‌ ಸ್ವಾಗತಿಸಿ, ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು