6:10 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಓಬಳಾಪುರ: ಸರಕಾರ ನಿರ್ಮಿಸಿದ ಚೆಕ್ ಡ್ಯಾಂ ಒಡೆದು ಅಕ್ರಮ ಮರಳು ಸಾಗಣಿಕೆ; ಗ್ರಾಮಸ್ಥರಿಂದ ಆರೋಪ

09/10/2021, 21:52

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಹುರುಳಿಹಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓಬಳಾಪುರ ಗ್ರಾಮದ ಹೊರವಲಯದಲ್ಲಿ ಹಳ್ಳದಲ್ಲಿ ನಿರ್ಮಿಸಿರುವ ಚೆಕ್ ಡ್ಯಾಂ ಒಡೆದು ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ ದೂರು ಕೇಳಿ ಬಂದಿದೆ.


ಗ್ರಾಮದ ವ್ಯಕ್ತಿಯೊಬ್ಬರು ಚೆಕ್ ಡ್ಯಾಂ ಕೆಡವಿ ಅದರಡಿಯಲ್ಲಿರುವ ಮರಳನ್ನು ಅಕ್ರಮವಾಗಿ ಬಗೆಯಲಾಗುತ್ತಿದ್ದು, ಮರಳನ್ನು ತಮ್ಮ ಕಾಮಗಾರಿಗೆ ಬಳಸುತ್ತಿದ್ದಾರೆಂದು ಓಬಳಾಪುರ ಗ್ರಾಮ ಸೇರಿದಂತೆ ಕೆಲ ಗ್ರಾಮಸ್ಥರು ದೂರಿದ್ದಾರೆ.

ಸರ್ಕಾರ ನಿರ್ಮಿಸಿರುವ ವೆಕ್ ಡ್ಯಾಂ ಅನ್ನು ಕೆಡವಿರೋದೇ ಕಾನೂನು ಬಾಹಿರವಾಗಿದ್ದು, ಹಳ್ಳದಲ್ಲಿರುವ ಮರಳನ್ನು ಯಾವುದೇ ಪರವಾನಗಿ ಇಲ್ಲದೇ ಸಾಗಿಸಲಾಗುತ್ತಿದೆ ಎಂದು ಹೊಸಹಳ್ಳಿ ಹೋಬಳಿಯ ಕೆಲ ಸಂಘಟನೆಗಳ ಪದಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು  ಕಂದಾಯ ಇಲಾಖಾಧಿಕಾರಿಗಳು ಹಾಗೂ ತಾಪಂ ಕಾರ್ಯನಿರ್ವಹಣಾಧಿಕಾರಿ ಸ್ಥಳ ಪರಿಶೀಲಸಬೇಕಿದೆ. ಸರ್ಕಾರ ನಿರ್ಮಿಸಿರುವ ಚೆಕ್ ಡ್ಯಾಂ ಧ್ವಂಸಗೊಳಿಸಲಾಗಿದೆ ಹಾಗೂ ಕೆಲ ದಿಬಗಳಿಂದ ನಿರಂತರ, ಪ್ರತಿ ದಿನ ಹತ್ತಾರು ಟ್ರಾಕ್ಟ್ರ್ ನಷ್ಟು ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದ್ದು, ಸಂಬಂಧಿಸಿದಂತೆ ತಾಪಂ ಕಾರ್ಯನಿರ್ಹಣಾಧಿಕಾರಿ ಹಾಗೂ ಕಂದಾಯ ಇಲಾಖಾಧಿಕಾರಿ ಶೀಘ್ರವೇ ಸ್ಥಳ ಪರಿಶೀಲಿಸಬೇಕಿದೆ. ಅಕ್ರಮ ಜರುಗಿಸಿರುವ ವಿರುದ್ಧ ಸೂಕ್ತ ಶಿಸ್ಥು ಕ್ರಮ ಜರುಗಿಸಬೇಕೆಂದು, ಓಬಳಾಪುರ ಗ್ರಾಮದವರು ಮತ್ತು ಕೆಲ ಸಂಘಟನೆಗಳ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು