8:46 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ 

27/05/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ 

ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಕೋವಿಡ್-19  ಎರಡನೇ  ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಪ್ರತಿನಿತ್ಯ  ಹೆಚ್ಚು ಕೊರೊನಾ ಸೋಂಕಿತರು ಮತ್ತು ಬ್ಲ್ಯಾಕ್ ಪಂಗಸ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅತ್ಯುನ್ನತ ದರ್ಜೆಯ ಆಸ್ಪತ್ರೆಗಳ ಕೊರತೆ ಹಾಗೂ ಜಿಲ್ಲೆಗೆ ಆಕ್ಸಿಜನ್, ವೆಂಟಿಲೇಟರ್, ಇಂಜೆಕ್ಷನ್ ಗಳು  ಸರಿಯಾದ ವೇಳೆಗೆ ಸರಬರಾಜು ಮಾಡುತ್ತಿಲ್ಲ,. ರಾಯಚೂರು ಗ್ರಾಮೀಣದ ರೈತರಿಗೆ 12 ತಾಸು ವಿದ್ಯುತ್ ಕಡಿತ ಮಾಡಿ ಕೇವಲ 7 ತಾಸು ಮಾತ್ರ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುತ್ತಿದ್ದಾರೆ. ಕನಿಷ್ಠ 12 ತಾಸು ವಿದ್ಯುತ್ ನೀಡಬೇಕೆಂದು ತಿಳಿಸಿದರು. 

ಮುಂಗಾರು ಪ್ರಾರಂಭವಾಗುವುದರಿಂದ ರೈತರಿಗೆ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ರೈತರಿಗೆ ಸಮರ್ಪಕವಾಗಿ ನೀಡಬೇಕು. ಕ್ಷೇತ್ರದಲ್ಲಿ  ಕೃಷಿ ಇನ್ನು ಮುಂತಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಲು ರಾಜ್ಯಸರ್ಕಾರಕ್ಕೆ ಒತ್ತಾಯಿಸುವಂತೆ ಶಾಸಕರು ಚರ್ಚಿಸಿದರು . ಈ ಸಂದರ್ಭದಲ್ಲಿ  ಲಿಂಗಸೂಗುರು ಶಾಸಕ ಡಿ.ಎಸ್. ಹೂಲಗೇರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು