ಇತ್ತೀಚಿನ ಸುದ್ದಿ
ಬೆಳಗಾವಿ ಜಿಲ್ಲೆಯಲ್ಲಿ ವಿಲಕ್ಷಣ ಘಟನೆ: ಯುವಕನ ಮೇಲೆ ಮತ್ತೊಬ್ಬ ಯುವಕ ಅತ್ಯಾಚಾರ; ಆರೋಪಿ ಬಂಧನ
10/10/2021, 16:41
ಅಥಣಿ(reporterkarnataka.com):
ಯುವಕನ ಮೇಲೆ ಯುವಕನ ಅತ್ಯಾಚಾರ: ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ವಿಲಕ್ಷಣ ಘಟನೆ ಬಸ್ ಗಾಗಿ ಕಾಯುತ್ತ ನಿಂತಿದ್ದ ಯುವಕನೊಬ್ಬನನ್ನು ಬೈಕ್ ನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ ವಿಲಕ್ಷಣ ಘಟನೆ ನಡೆದಿದೆ.
ರಾಜು ಎಂಬಾತ ಯುವಕನನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ಬಗ್ಗೆ ಯಾರಿಗಾದ್ರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಿ ಆರೋಪಿ ಬಂಧಿಸಲಾಗಿದೆ.