6:10 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಕುದ್ರೋಳಿ  ದೇಗುಲಕ್ಕೆ ಭೇಟಿ: ಸಂಜೆ 5 ಗಂಟೆಗೆ ಸಿಎಂ ವಿಶೇಷ ಪೂಜೆ

13/10/2021, 08:30

ಮಂಗಳೂರು(reporterkarnataka.com):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಗರಕ್ಕೆ ಆಗಮಿಸಲಿದ್ದು, ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಬುಧವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸುವ ಬೊಮ್ಮಾಯಿ ಅವರು ನೆರೆಯ ಉಡುಪಿ ಜಿಲ್ಲೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಕುದ್ರೋಳಿ ದೇವಸ್ಥಾನಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. 5.20ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ತೆರಳುವರು.

ಸಿಎಂಗೆ ಭದ್ರತೆ ಹಾಗೂ ವಿಶೇಷ ತಯಾರಿಗಳನ್ನು ಕೈಗೊಳ್ಳಬೇಕಾದ ಹಿನ್ನಲೆಯಲ್ಲಿ ಅ.13ರ ಮಧ್ಯಾಹ್ನ 3 ರಿಂದ ಸಂಜೆ 7 ಗಂಟೆಯವರೆಗೆ ಆಗಮಿಸುವ ಭಕ್ತಾಧಿಗಳಿಗೆ ಅನಾನುಕೂಲವಾಗಲಿದೆ. ರಾತ್ರಿ 7 ರಿಂದ ಎಂದಿನಂತೆ ದರುಶನಕ್ಕೆ ಅವಕಾಶವಿದೆ. ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ನಾಗರೀಕರು ಸಹಕರಿಸುವಂತೆ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು